ಸಮಗ್ರ ನ್ಯೂಸ್: ದ.ಕ ಜಿಲ್ಲೆಯ ಹಲವೆಡೆ ಬಿರುಸಿನ ಗಾಳಿ-ಮಳೆ ಮುಂದುವರೆದಿದ್ದು, ಮೇ 26ರ ಸೋಮವಾರ ದ.ಕ. ಜಿಲ್ಲೆಯ ಎಲ್ಲ ಅಂಗನವಾಡಿಗಳಿಗೆ ರಜೆ ಘೋಷಿಸಲಾಗಿದೆ.
ತೀವ್ರ ಮಳೆ ಹಿನ್ನೆಲೆ ಜಿಲ್ಲೆಯ ಎಲ್ಲ ಅಂಗನವಾಡಿಗಳಿಗೆ ರಜೆ ಘೋಷಿಸಿ ಆದೇಶಿಸಲಾಗಿದೆ. ಗಾಳಿ-ಮಳೆ ಹೆಚ್ಚಿರುವ ಕಾರಣ ಜಾಗೃತೆ ವಹಿಸಲು ಸಾರ್ವಜನಿಕರಿಗೆ ಸೂಚಿಸಲಾಗಿದೆ.
ಮಕ್ಕಳ ಸುರಕ್ಷತೆ ದೃಷ್ಠಿಯಿಂದ ಜಿಲ್ಲೆಯಲ್ಲಿರುವ ಎಲ್ಲ ಮದರಸಗಳ ಆಡಳಿತ ಮಂಡಳಿಗಳು ಹಾಗೂ ಸದರ್ ಉಸ್ತಾದರು ಮೇ 26ರಂದು ಮದ್ರಸಗಳಿಗೆ ರಜೆ ನೀಡುವ ಬಗ್ಗೆ ತೀರ್ಮಾನ ಕೈಗೊಳ್ಳಲು ದ.ಕ.ಜಿಲ್ಲಾ ವಕ್ಫ್ ಸಲಹಾ ಸಮಿತಿ ಸೂಚಿಸಿದೆ.