ಸಮಗ್ರ ನ್ಯೂಸ್: ಭಾರೀ ಮಳೆ, ರೆಡ್ ಅಲರ್ಟ್ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರದಂದು ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಿಸಲಾಗಿತ್ತು.
ಮುಂದುವರಿದಂತೆ ಇದೀಗ ಮೇ 27 ಮತ್ತು 28ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಸಿಬಿಎಸ್‌ಸಿ, ಪದವಿ ಪೂರ್ವ ಸರಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ. ಸಾರ್ವಜನಿಕರು ಎಚ್ಚರ ವಹಿಸಲು ಜಿಲ್ಲಾಡಳಿತ ಸೂಚನೆ ನೀಡಿದೆ.