ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದುಷ್ಕರ್ಮಿಗಳ ಅಟ್ಟಹಾಸ ಮುಂದುವರಿದಿದ್ದು ಬಂಟ್ವಾಳ ತಾಲೂಕಿನ ಕಾಂಬೋಡಿ ಎಂಬಲ್ಲಿ ಇಬ್ಬರು ಮುಸ್ಲಿಂ ಯುವಕರ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ ಎಂದು ವರದಿಯಾಗಿದೆ.
ಕೊಳತ್ತಮಜಲು ನಿವಾಸಿ ಪಿಕಪ್ ಮಾಲೀಕ ರಹೀಂ ಮತ್ತು ಸಹಾಯಕ ಶಾಫಿ ಎಂಬವರ ಮೇಲೆ ಅಪರಿಚಿತ ದುಷ್ಕರ್ಮಿಗಳ ತಂಡ ಮಾರಕಾಸ್ತ್ರಗಳಿಂದ ದಾಳಿ ಮಾಡಿ ಪರಾರಿಯಾಗಿದೆ ಎಂದು ತಿಳಿದುಬಂದಿದೆ. ಹಲ್ಲೆಗೀಡಾದ ರಹೀಂ ಗಂಭೀರವಾಗಿ ಗಾಯಗೊಂಡಿದ್ದು ಅವರ ಸ್ಥಿತಿ ಚಿಂತಾಜನಕವಾಗಿದ್ದು, ಶಾಫಿ ಅವರ ಸ್ಥಿತಿ ಕೂಡ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ಗಾಯಾಳುಗಳನ್ನು ಬಂಟ್ವಾಳ ಆಸ್ಪತ್ರೆಗೆ ರವಾನಿಸಲಾಗಿದೆ. ಪಿಕಪ್ ಮಾಲೀಕ ರಹೀಂ ಮನೆಯೊಂದರ ಬಳಿ ಮರಳು ಅನ್’ಲೋಡ್ ಮಾಡಿ ವಾಪಾಸಾಗುವ ಸಮಯದಲ್ಲಿ ಅಪರಿಚಿತ ದುಷ್ಕರ್ಮಿಗಳ ತಂಡ ತಲ್ವಾರ್ ನಿಂದ ದಾಳಿ ನಡೆಸಿರುವುದಾಗಿ ತಿಳಿದುಬಂದಿದೆ.