ಶತಮಾನದ ಮಹಾಮಳೆಗೆ ತತ್ತರಿಸಿದ ದಕ್ಷಿಣ ಕನ್ನಡ| ಒಂದೇ ದಿನ ಐವರು ಬಲಿ| ಇನ್ನಷ್ಟು ದಿನ ಮಳೆ? ಇಲ್ಲಿದೆ ಸಂಪೂರ್ಣ ಮಾಹಿತಿ…

ಸಮಗ್ರ ನ್ಯೂಸ್: ಮಹಾಮಳೆಗೆ ದಕ್ಷಿಣ ಕನ್ನಡ ಅಕ್ಷರಶಃ ತತ್ತರಿಸಿದೆ. ಭೂಕುಸಿತ, ಗೋಡೆ ಕುಸಿತ, ಮಳೆ ಪ್ರವಾಹ ಹೀಗೆ ಒಂದರ ಹಿಂದೊಂದು ಹೊಡೆತ ದಕ್ಷಿಣ ಕನ್ನಡಕ್ಕೆ ಬೀಳುತ್ತಲೇ ಇದೆ. ಭೂಮಿ ಕುಸಿದು ನಾಲ್ವರ ಸಾವು ಬೆನ್ನಲ್ಲೇ ಈಗ ಮತ್ತೆ ಆತಂಕ ಶುರುವಾಗಿದೆ. ಇಂದು(ಮೇ.31) ಕೂಡ ಜಿಲ್ಲೆಯಲ್ಲಿ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಹೀಗಾಗಿ, ಅಂಗನವಾಡಿಗಳು, ಶಾಲೆಗಳು, ಪಿಯು ಕಾಲೇಜುಗಳಿಗೂ ಇವತ್ತು ರಜೆ ಘೋಷಿಸಲಾಗಿದೆ.

Ad Widget . Ad Widget . Ad Widget . Ad Widget . Ad Widget . Ad Widget .

ರಾಜ್ಯದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿರುವ ಮಳೆ ಶತಮಾನದ ಮಳೆಯಂತೆ. ಇದನ್ನ ಖುದ್ದು ರಾಜ್ಯ ಸರ್ಕಾರದ ಅಧಿಕಾರಿಗಳೇ ಸಿಎಂ ಸಿದ್ದರಾಮಯ್ಯ ನೇತೃತ್ವದ ಸಭೆಯಲ್ಲಿ ಹೇಳಿದ್ದಾರೆ. 125 ವರ್ಷಗಳಲ್ಲಿ ಮೇ ತಿಂಗಳಲ್ಲಿ ಇಷ್ಟೊಂದು ಮಳೆ ಬಿದ್ದಿದೆ ಅಂತಾ ಅಧಿಕಾರಿಗಳು ಸಿಎಂಗೆ ಮಾಹಿತಿ ನೀಡಿದ್ದಾರೆ. ಅಷ್ಟೇ ಅಲ್ಲ, ಏಪ್ರಿಲ್‌ನಿಂದ ಈವರೆಗೆ ರಾಜ್ಯದಲ್ಲಿ ಮಳೆ ಅನಾಹುತಗಳಿಗೆ ಬರೋಬ್ಬರಿ 67 ಜನರು ಮೃತಪಟ್ಟಿದ್ದಾರೆ ಅನ್ನೋ ಮಾಹಿತಿಯನ್ನ ಕಂದಾಯ ಇಲಾಖೆ ನೀಡಿದೆ.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಮಾರ್ಚ್ ನಿಂದ ಮೇ ವರೆಗೆ ಸಾಮಾನ್ಯವಾಗಿ ಪೂರ್ವ ಮುಂಗಾರು ಅವಧಿ ಎಂದು ಪರಿಗಣಿಸಲಾಗುತ್ತದೆ. ಆದರೆ ಈ ವರ್ಷ ಮುಂಗಾರು ಮಳೆ ರಾಜ್ಯಕ್ಕೆ ಸುಮಾರು 10 ದಿನಗಳ ಮುಂಚಿತವಾಗಿ ಪ್ರವೇಶಿಸಿದೆ. ಇದರ ಪರಿಣಾಮವಾಗಿ, ಮೈಸೂರು, ಕೊಡಗು, ಮಂಡ್ಯ ಮತ್ತು ಹಾಸನ ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮೇ ತಿಂಗಳಿನಲ್ಲಿ ಸಾಮಾನ್ಯಕ್ಕಿಂತ ಹೆಚ್ಚು ಮಳೆಯಾಗಿದೆ.

ಇನ್ನು ಭಾರತೀಯ ಹವಾಮಾನ ಇಲಾಖೆ ಪ್ರಕಾರ ಉಡುಪಿ ಮತ್ತು ದಕ್ಷಿಣ ಕನ್ನಡ ಸೇರಿದಂತೆ ಕರ್ನಾಟಕದ ಕರಾವಳಿ ಪ್ರದೇಶಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಿದ್ದು, ಸಿಡಿಲು ಗುಡುಗಿನೊಂದಿಗೆ ಅತೀ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ. ಉತ್ತರ ಕನ್ನಡದಲ್ಲಿ ಯಲ್ಲೋ ಅಲರ್ಟ್ ನೀಡಲಾಗಿದೆ.

ಬೆಂಗಳೂರಿನಲ್ಲಿ ಇಂದು ದಿನವಿಡೀ ಮೋಡ ಕವಿದ ವಾತಾವರಣವಿರಲಿದ್ದು, ಸಾಧಾರಣಾ ಮಳೆಯಾಗುವ ನಿರೀಕ್ಷೆಯಿದೆ. ಕನಿಷ್ಠ ತಾಪಮಾನ 21.0 ಡಿಗ್ರಿ ಸೆಲ್ಸಿಯಸ್‌ಗೆ ಇಳಿಯುವ ಸಾಧ್ಯತೆಯಿದ್ದು, ಗರಿಷ್ಠ ತಾಪಮಾನ 27.0 ಡಿಗ್ರಿ ಸೆಲ್ಸಿಯಸ್‌ಗೆ ತಲುಪಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ.

ಉಳ್ಳಾಲ ತಾಲ್ಲೂಕು ಮಂಜನಾಡಿ ಗ್ರಾಮದ ಮೊಂಟೆಪದವು ಪಂಬದಹಿತ್ತಿಲುಕೋಡಿ ಎಂಬಲ್ಲಿ ಮನೆ ಮೇಲೆ ಗುಡ್ಡ ಕುಸಿದು ಬಿದ್ದು ಪ್ರೇಮಾ ಕಾಂತಪ್ಪ ಪೂಜಾರಿ (65), ಅವರ ಪುತ್ರ ಸೀತಾರಾಂ ಅವರ ಮಕ್ಕಳಾದ ಆರ್ಯನ್‌ (3) ಹಾಗೂ ಆರುಷ್‌ (2) ಸಾವಿಗೀಡಾಗಿದ್ದು ಬೆಳ್ಮ ಗ್ರಾಮದ ಕಾಣೆಕೆರೆಯಲ್ಲಿ ಗುಡ್ಡ ಕುಸಿದು ನೌಷಾದ್ ಅವರ ಪುತ್ರಿ ಫಾತಿಮಾ ನಯೀಮ (11) ಪ್ರಾಣ ಕಳೆದುಕೊಂಡಿದ್ದಾರೆ.

ಬಂಟ್ವಾಳ ತಾಲ್ಲೂಕಿನಲ್ಲಿ ನಿಯಂತ್ರಣ ಕಳೆದುಕೊಂಡ ಲಾರಿ ವಿದ್ಯುತ್ ಪರಿವರ್ತಕಕ್ಕೆ ಡಿಕ್ಕಿ ಹೊಡೆದು ಕಂದಕಕ್ಕೆ ಉರುಳಿ ಜಾರ್ಖಂಡ್‌ನ ಕಾರ್ಮಿಕರೊಬ್ಬರು ಸಾವಿಗೀಡಾಗಿದ್ದಾರೆ. ನೇತ್ರಾವತಿ ನದಿಯಲ್ಲಿ ಮೀನು ಹಿಡಿಯಲು ಹೋಗಿದ್ದ ಇಬ್ಬರು ನಾಪತ್ತೆಯಾಗಿದ್ದಾರೆ.

ಮೂಡುಬಿದಿರೆ ತಾಲ್ಲೂಕಿನ ವಾಲ್ಪಾಡಿ ಗ್ರಾಮದ ಕಟ್ಟಡದಡಿಯ ಕಿಂಡಿ ಅಣೆಕಟ್ಟೆಯ ಹಲಗೆ ತೆಗೆಯಲು ಹೋಗಿದ್ದ ಗ್ರಾಮದ ಗುರುಪ್ರಸಾದ್ ಭಟ್ (38) ಎಂಬವರು ನೀರಿಗೆ ಬಿದ್ದು ಕೊಚ್ಚಿಕೊಂಡು ಹೋಗಿದ್ದಾರೆ. ಬೆಳ್ತಂಗಡಿ ತಾಲೂಕಿನ ಓಡಿಲ್ನಾಳದಲ್ಲಿ ಟಿಸಿ ದುರಸ್ತಿ ಮಾಡುವ ವೇಳೆ ಮೆಸ್ಕಾಂ ನೌಕರ ವಿಜೇಶ್ ಜೈನ್ ವಿದ್ಯುತ್ ತಗುಲಿ ಸಾವನ್ನಪ್ಪಿದ್ದಾನೆ. ಮೃತರ ಕುಟುಂಬಕ್ಕೆ ರಾಜ್ಯ ಸರ್ಕಾರ ಪರಿಹಾರ ಘೋಷಣೆ ಮಾಡಿದೆ.

Leave a Comment

Your email address will not be published. Required fields are marked *