ಬೆಂಗಳೂರು ಕಾಲ್ತುಳಿತ ಪ್ರಕರಣ| ಮೃತರ ಪರಿಹಾರ ಮೊತ್ತ 25ಲಕ್ಷಕ್ಕೆ ಏರಿಸಿ ‌ಸಿಎಂ ಆದೇಶ

ಸಮಗ್ರ ನ್ಯೂಸ್: ಆರ್‌ಸಿಬಿ ವಿಜಯೋತ್ಸವದ ದುರಂತ ಘಟನೆ ಕಾಂಗ್ರೆಸ್ ಸರ್ಕಾರಕ್ಕೆ ತೀವ್ರ ಹಿನ್ನಡೆ ತಂದಿದೆ. 18 ವರ್ಷಗಳ ಬಳಿಕ ಟ್ರೋಫಿ ಗೆದ್ದ ಆರ್‌ಸಿಬಿ ತಂಡಕ್ಕೆ ಸನ್ಮಾನ ಕಾರ್ಯಕ್ರಮದಲ್ಲಿ ಸಂಭವಿಸಿದ ಕಾಲ್ತುಳಿತ ಘಟನೆಯಲ್ಲಿ 11 ಅಭಿಮಾನಿಗಳು ಮೃತಪಟ್ಟಿದ್ದಾರೆ.56ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

Ad Widget . Ad Widget . Ad Widget .

ಸೂಕ್ತ ಸುರಕ್ಷತಾ ಕ್ರಮ ಕೈಗೊಳ್ಳದೆ ತರಾತುರಿಯಲ್ಲಿ ಸರ್ಕಾರ ಕಾರ್ಯಕ್ರಮ ಆಯೋಜಿಸಿದ ಕಾರಣ ಈ ಘಟನೆ ನಡೆದಿದೆ ಎಂದು ವಿಪಕ್ಷಗಳು ಆರೋಪಿಸಿದೆ. ಈ ದುರಂತ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಸರ್ಕಾರ ಘೋಷಿಸಿದ ಪರಿಹಾರ ಮೊತ್ತ ಕಡಿಮೆ ಎಂದು ವಿಪಕ್ಷಗಳು ಆರೋಪ ಮಾಡಿತ್ತು. ಈ ಬೆಳವಣಿಗೆ ಬೆನ್ನಲ್ಲೇ ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಮೃತರ ಕುಟುಂಬಗಳಿಗೆ ಘೋಷಿಸಿದ ಪರಿಹಾರವನ್ನು ಮೊತ್ತವನ್ನು 25 ಲಕ್ಷ ರೂಪಾಯಿಗೆ ಏರಿಕೆ ಮಾಡಲಾಗಿದೆ.

Ad Widget . Ad Widget .

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ದುರಂತದಲ್ಲಿ ಮೃತಪಟ್ಟವರ ಪ್ರತಿ ಕುಟುಂಬಕ್ಕೆ ಆರಂಭದಲ್ಲಿ ಸರ್ಕಾರ ತಲಾ 10 ಲಕ್ಷ ರೂಪಾಯಿ ಪರಿಹಾರ ಮೊತ್ತ ಘೋಷಿಸಿತ್ತು. ಆದರೆ ಕೇರಳದಲ್ಲಿ ಆನೆ ತುಳಿದು ಮೃತಪಟ್ಟ ವ್ಯಕ್ತಿಗೆ ಇದಕ್ಕಿಂತ ಹೆಚ್ಚಿನ ಮೊತ್ತ ಪರಿಹಾರವನ್ನು ಕರ್ನಾಟಕ ಸರ್ಕಾರ ಘೋಷಿಸಿದೆ. ಆದರೆ ಸರ್ಕಾಕರ ನಿರ್ಲಕ್ಷಕ್ಕೆ ಬಲಿಯಾದವರಿಗೆ ಕೇವಲ 10 ಲಕ್ಷ ರೂಪಾಯಿ ಮಾತ್ರ ಘೋಷಿಸಿದೆ ಎಂದು ವಿಪಕ್ಷಗಳು ಆರೋಪಿಸಿತ್ತು. ಇತ್ತ ಸರ್ಕಾರದ ವಿರುದ್ದ ತೀವ್ರ ಆಕ್ರೋಶ ವ್ಯಕ್ತವಾಗುತ್ತಿರುವ ಬೆನ್ನಲ್ಲೇ ಇದೀಗ ಪರಿಹಾರ ಮೊತ್ತವನ್ನು 25 ಲಕ್ಷ ರೂಪಾಯಿಗೆ ಏರಿಕೆ ಮಾಡಲಾಗಿದೆ.

Leave a Comment

Your email address will not be published. Required fields are marked *