ಜನಾರ್ದನ ರೆಡ್ಡಿಗೆ ಬಿಗ್‌ ರಿಲೀಫ್‌ – ತೆಲಂಗಾಣ ಹೈಕೋರ್ಟ್‌ನಿಂದ ಜಾಮೀನು

ಸಮಗ್ರ ನ್ಯೂಸ್: ಬಿಜೆಪಿ ಶಾಸಕರಾಗಿದ್ದ ಗಾಲಿ ಜನಾರ್ದನ ರೆಡ್ಡಿಗೆ ತೆಲಂಗಾಣ ಹೈಕೋರ್ಟ್ ಇದೀಗ ಜಾಮೀನು ಮಂಜೂರು ಮಾಡಿದೆ. ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜನಾರ್ದನ ರೆಡ್ಡಿ ಮತ್ತು ಅವರ ಸಂಬಂಧಿ ಓಬಳಾಪುರಂ ಮೈನಿಂಗ್ ಕಾರ್ಪೊರೇಷನ್ (ಒಎಂಸಿ) ವ್ಯವಸ್ಥಾಪಕ ನಿರ್ದೇಶಕ ಬಿ.ವಿ. ಶ್ರೀನಿವಾಸ್ ರೆಡ್ಡಿ ಸೇರಿದಂತೆ ನಾಲ್ವರಿಗೆ ಹೈದರಾಬಾದ್‌ನಲ್ಲಿರುವ ಕೇಂದ್ರೀಯ ತನಿಖಾ ದಳ (ಸಿಬಿಐ) ವಿಶೇಷ ನ್ಯಾಯಾಲಯ 7 ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು. ಈ ಆದೇಶಕ್ಕೆ ಇದೀಗ ತೆಲಂಗಾಣ ಹೈಕೋರ್ಟ್‌ ತಡೆ ನೀಡಿದೆ.

Ad Widget ... ..

ರೆಡ್ಡಿಗೆ ಷರತ್ತುಬದ್ಧ ಜಾಮೀನು ನೀಡಿರುವ ಕೋರ್ಟ್‌, ತಲಾ 10 ಲಕ್ಷ ಮೌಲ್ಯದ ಇಬ್ಬರು ಶ್ಯೂರಿಟಿಗಳನ್ನು ಸಲ್ಲಿಸುವಂತೆ ಸೂಚನೆ ನೀಡಿದೆ. ಅಲ್ಲದೇ, ಭಾರತ ಬಿಟ್ಟು ಹೋಗಲು ಅನುಮತಿ ಇರುವುದಿಲ್ಲ. ಗಾಲಿ ಜನಾರ್ದನ ರೆಡ್ಡಿ ಅವರ ಪಾಸ್‌ಪೋರ್ಟ್ ಅನ್ನು ಒಪ್ಪಿಸುವಂತೆಯೂ ಆದೇಶಿಸಿದೆ.

Ad Widget

Leave a Comment

Your email address will not be published. Required fields are marked *