ರಾಷ್ಟ್ರ ಪ್ರಶಸ್ತಿ ವಿಜೇತ ಶಿಕ್ಷಕ ಕುಮಾರ್ ಕುಮಾರಮಂಗಲ ಇನ್ನಿಲ್ಲ

ಪುತ್ತೂರು: ಶಿಕ್ಷಣ ಕ್ಷೇತ್ರದಲ್ಲಿನ ಉತ್ತಮ ಸೇವೆಗಾಗಿ ಜಿಲ್ಲಾ, ರಾಜ್ಯ ಮತ್ತು ರಾಷ್ಟ್ರ ಮಟ್ಟದ ಪ್ರಶಸ್ತಿ ಪುರಸ್ಕೃತರಾಗಿದ್ದ ನಿವೃತ್ತ ಶಿಕ್ಷಕ ಕುಮಾರ್ ಮಾಸ್ಟರ್ ಕುಮಾರಮಂಗಲ(68) ಅಲ್ಪ ಕಾಲದ ಅಸೌಖ್ಯದಿಂದ ಮಂಗಳವಾರ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

Ad Widget ... ..

ಪುತ್ತೂರು ತಾಲೂಕಿನ ಕಬಕ ಗ್ರಾಮದ ವಿದ್ಯಾಪುರ ಎಂಬಲ್ಲಿನ ನಿವಾಸಿಯಾಗಿರುವ ಕುಮಾರ್ ಮಾಸ್ಟರ್ ಅವರು 36 ವರ್ಷಗಳ ಕಾಲ ಪ್ರಾಥಮಿಕ ಶಾಲಾ ಶಿಕ್ಷಕರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು.

Ad Widget

ಇವರ ಸೇವೆಯನ್ನು ಗುರುತಿಸಿ 1994ರಲ್ಲಿ ಜಿಲ್ಲಾ ಪ್ರಶಸ್ತಿ, 2009ರಲ್ಲಿ ರಾಜ್ಯ ಪ್ರಶಸ್ತಿ ಹಾಗೂ 2011ರಲ್ಲಿ ಇವರಿಗೆ ರಾಷ್ಟ್ರೀಯ ಉತ್ತಮ ಶಿಕ್ಷಕ ಪ್ರಶಸ್ತಿ ಲಭಿಸಿತ್ತು.

ಸಾರ್ವಜನಿಕ ಸೇವೆಯಲ್ಲಿಯೂ ತೊಡಗಿಸಿಕೊಂಡಿದ್ದ ಅವರು ಪುತ್ತೂರು ಲಯನ್ಸ್ ಕ್ಲಬ್ ಕಾರ್ಯದರ್ಶಿಯಾಗಿ, ಪುತ್ತುರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಪದಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು. ಪ್ರಸ್ತುತ ಕರ್ನಾಟಕ ರಾಜ್ಯ ಮೊಗೇರ ಸಂಘದ ಗೌರವ ಅಧ್ಯಕ್ಷರಾಗಿದ್ದರು.
ಮೃತರು ಪತ್ನಿ, ಮೂವರು ಪುತ್ರರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Leave a Comment

Your email address will not be published. Required fields are marked *