ಕಿಟಕಿ‌ ಬದಿಯ ಸೀಟಿಗಾಗಿ ಜಗಳ| ಯುವಕನಿಗೆ ಚೂರಿ ಇರಿತ

ಸಮಗ್ರ ನ್ಯೂಸ್: ರಾಜ್ಯ ಸರ್ಕಾರ ಶಕ್ತಿ ಯೋಜನೆ ಜಾರಿ ಮಾಡಿದಾಗಿನಿಂದಲೂ, ಪುರುಷರಿಗೆ ಬಸ್ನಲ್ಲಿ ಕುಳಿತುಕೊಳ್ಳಲು ಸೀಟ್ ಸಿಗುವುದೇ ಅಪರೂಪ ಅಂತದರಲ್ಲಿ ಇದೀಗ ಬಸ್ ನಲ್ಲಿ ಕಿಟಕಿ ಪಕ್ಕ ಸೀಟ್ ಗಾಗಿ ಯುವಕರ ಮಧ್ಯ ಗಲಾಟೆ ನಡೆದು ಓರ್ವ ಯುವಕನಿಗೆ ಚಾಕು ಇರಿದಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.

Ad Widget ... ..

ಪಂಚಬಾಳೇಕುಂದ್ರಿ ಗ್ರಾಮದಿಂದ ಸಿಬಿಟಿಗೆ ಬರುತ್ತಿದ್ದ ಬಸ್​ನಲ್ಲಿ ಕಿಟಕಿ ಪಕ್ಕದ ಸೀಟ್​ಗಾಗಿ ಯುವಕರ ಮಧ್ಯೆ ಗಲಾಟೆ ನಡೆದಿದ್ದು, ಓರ್ವ ಯುವಕನಿಗೆ ಚಾಕು ಇರಿಯಲಾಗಿದೆ.ಗ್ರಾಮದ ಮಜ್ಜು ಸನದಿ(20) ಎಂಬ ಯುವಕ ಎದೆ ಭಾಗಕ್ಕೆ ಯುವಕರ ಗ್ಯಾಂಗ್​ ಒಂದು ಚಾಕು ಇರಿದು ಪರಾರಿ ಆಗಿದೆ.

Ad Widget

ಹೊಟ್ಟೆಯ ಭಾಗಕ್ಕೆ ಚಾಕು ಇರಿದಿದ್ದರಿಂದ ತೀವ್ರವಾಗಿ ರಕ್ತಸ್ರಾವ ಆಗಿತ್ತು. ತಕ್ಷಣ ಗಾಯಾಳು ಯುವಕನನ್ನು ಬೆಳಗಾವಿ ಬಿಮ್ಸ್​ ಆಸ್ಪತ್ರೆ ಐಸಿಯುನಲ್ಲಿ ಮಜ್ಜುಗೆ ಚಿಕಿತ್ಸೆ ನೀಡಲಾಗಿದೆ. ಸ್ಥಳಕ್ಕೆ ಡಿಸಿಪಿ ರೋಹನ್​ ಜಗದೀಶ್ ಭೇಟಿ ನೀಡಿ ಪರಿಶೀಲನೆ ಮಾಡಿದರು. ಮಾರ್ಕೆಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Leave a Comment

Your email address will not be published. Required fields are marked *