ಗಾಯಕಿ‌ ಅಖಿಲಾ ಪಜಿಮಣ್ಣು ದಾಂಪತ್ಯದಲ್ಲಿ ಬಿರುಕು| ವಿಚ್ಛೇದನಕ್ಕೆ ಅರ್ಜಿ

ಸಮಗ್ರ ನ್ಯೂಸ್: ಪುತ್ತೂರಿನ ಖ್ಯಾತ ಗಾಯಕಿ ಅಖಿಲಾ ಪಜಿಮಣ್ಣು ದಾಂಪತ್ಯದಲ್ಲಿ ಬಿರುಕು ಮೂಡಿದ್ದು, ಇದೀಗ ವಿಚ್ಚೇಧನಕ್ಕೆ ಪುತ್ತೂರು ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ.

. Ad Widget . Ad Widget

ಅಖಿಲಾ ಪಜಿಮಣ್ಣು ಪುತ್ತೂರಿನ ಪಜಿಮಣ್ಣು ಎನ್ನುವ ಗ್ರಾಮದ ನಿವಾಸಿಯಾಗಿದ್ದು, ಕನ್ನಡ ಕೋಗಿಲೆ 1 ಹಾಗೂ 2ನೇ ಆವೃತ್ತಿಯಲ್ಲಿ ರನ್ನರ್ ಅಪ್ ಆಗಿರುವ ಅಖಿಲಾ ಪಜಿಮಣ್ಣು ತಮ್ಮ ಸುಮಧುರ ಕಂಠದಿಂದ ಎಲ್ಲರ ಮನೆ ಮಾತಾಗಿದ್ದಾರೆ. ಇದೀಗ ಅವರ ಬಾಳಲ್ಲಿ ಬಿರುಗಾಳಿ ಎದ್ದಿದ್ದು ಅಖಿಲಾ ಪಜಿಮಣ್ಣು ಮತ್ತು ಆಕೆಯ ಪತಿ ಟಿ.ಆರ್. ಧನರಾಜ್ ಶರ್ಮರಿಂದ ವಿವಾಹ ವಿಚ್ಛೇಧನಕ್ಕೆ ಅರ್ಜಿ ಸಲ್ಲಿಸಿದ್ದಾರೆ.

. Ad Widget . . Ad Widget . Ad Widget

ವೃತ್ತಿಯಲ್ಲಿ ಸಾಫ್ಟ್‌ವೇರ್‌ ಇಂಜಿನಿಯರ್‌ ಆಗಿ ಅಮೆರಿಕದಲ್ಲಿ ವಾಸವಿದ್ದ ಧನಂಜಯ್‌ ಶರ್ಮ ಅವರನ್ನು ಮೂರು ವರ್ಷಗಳ ಹಿಂದೆ ಮದುವೆಯಾಗಿದ್ದರು. ಪುತ್ತೂರು ಕೋರ್ಟ್‌ನಲ್ಲಿ ಇಬ್ಬರೂ ಕೂಡ ತಮ್ಮ ವಿಚ್ಛೇದನಕ್ಕೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಇಬ್ಬರೂ ಒಪ್ಪಿಗೆಯಿಂದ ಈ ನಿರ್ಧಾರಕ್ಕೆ ಬಂದಿರುವುದಾಗಿ ತಿಳಿಸಿದ್ದಾರೆ.

ಅಖಿಲಾ ಪಜಿಮಣ್ಣು ದಾಂಪತ್ಯ ಜೀವನದಿಂದ ದೂರವಿರಲು ನಿರ್ಧರಿಸಿ ಡಿವೋರ್ಸ್‌ಗೆ ಅರ್ಜಿ ನೀಡಿದ ಬೆನ್ನಲ್ಲೇ ತನ್ನ ಸೋಶಿಯಲ್ ಮೀಡಿಯಾ ಖಾತೆಗಳಿಂದ ಪತಿ ಫೋಟೋಗಳು, ವಿಡಿಯೋಗಳನ್ನು ಡಿಲೀಟ್ ಮಾಡಿದ್ದಾರೆ. ಈ ಮೊದಲು ಸೋಶಿಯಲ್ ಮೀಡಿಯಾ ಖಾತೆಗಳಲ್ಲಿ ನಿಶ್ಚಿತಾರ್ಥ, ಮದುವೆ, ಟ್ರಿಪ್ ಸೇರಿದಂತೆ ಹಲವು ಫೋಟೋ ವಿಡಿಯೋಗಳನ್ನು ಪೋಸ್ಟ್ ಮಾಡಿದ್ದರು. ಇದೀಗ ಎಲ್ಲವನ್ನು ಡಿಲೀಟ್ ಮಾಡಿದ್ದಾರೆ.

Leave a Comment

Your email address will not be published. Required fields are marked *