ಸಮಗ್ರ ನ್ಯೂಸ್: ಕರ್ನಾಟಕದ ಕರಾವಳಿ ಹಾಗೂ ಮಲೆನಾಡು ಸೇರಿದಂತೆ ವಿವಿಧ ಭಾಗದಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ಕರ್ನಾಟಕದ ಒಳನಾಡಿನಲ್ಲಿ ನೈಋತ್ಯ ಮಾನ್ಸೂನ್ ಸಕ್ರಿಯವಾಗಿದ್ದು, ಕರಾವಳಿ ಕರ್ನಾಟಕದಾದ್ಯಂತ ಸಾಮಾನ್ಯವಾಗಿತ್ತು. ಕರಾವಳಿ ಕರ್ನಾಟಕದ ಹೆಚ್ಚಿನ ಸ್ಥಳಗಳಲ್ಲಿ ಮತ್ತು ಕರ್ನಾಟಕದ ಒಳನಾಡಿನ ಹಲವೆಡೆ ಮಳೆಯಾಗಿದೆ.
ಇಂದು ಸಹ ವಿವಿಧ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ಭಾರೀ ಮಳೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಕರಾವಳಿ ಹಾಗೂ ಮಲೆನಾಡಿನ ಜಿಲ್ಲೆಗಳಲ್ಲಿ ಮಳೆ ನಿಲ್ಲದೆ ಸಂಕಷ್ಟ ಎದುರಾಗಿದೆ. ಭಾಗಮಂಡಲದ ತ್ರಿವೇಣಿ ಸಂಗವು ಒಂದೇ ತಿಂಗಳ ಅವಧಿಯಲ್ಲಿ ಮೂರನೇ ಬಾರಿ ಜಲಾವೃತವಾಗಿದೆ. ಹಲವು ಭಾಗದಲ್ಲಿ ಧಾರಾಕಾರ ಮಳೆಯಿಂದ ಜಲಾವೃತವಾಗಿದೆ.
ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಮಳೆ ಅಬ್ಬರ ಮುಂದುವರಿದಿದೆ. ಇಂದೂ ಸಹ ಈ ಭಾಗದಲ್ಲಿ ಧಾರಾಕಾರ ಮಳೆ ಆಗುವ ಸಾಧ್ಯತೆ ಇದೆ. ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ಕೊಡಗು ಜಿಲ್ಲೆಯಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ಹೀಗಾಗಿ ರೆಡ್ ಅಲರ್ಟ್ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.
ಕರಾವಳಿಯ ಮೂರು ಜಿಲ್ಲೆಗಳಲ್ಲೂ ಇಂದು ಧಾರಾಕಾರ ಮಳೆ ಇರಲಿದೆ. ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ವರದಿ ಉಲ್ಲೇಖಿಸಿದೆ.
ಉತ್ತರ ಒಳನಾಡಿನ ಬೆಳಗಾವಿಯಲ್ಲಿ ಧಾರಾಕಾರ ಮಳೆ ಮುಂದುವರಿದಿದ್ದು. ಬಾಗಲಕೋಟೆ, ಧಾರವಾಡ, ಹಾವೇರಿ, ಗದಗ, ಕೊಪ್ಪಳ, ಬೀದರ್, ಕಲಬುರಗಿ, ವಿಜಯಪುರ, ರಾಯಚೂರು, ವಿಜಯನಗರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಮಳೆ ಅಬ್ಬರ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.
ದಕ್ಷಿಣ ಕರ್ನಾಟಕ: ದಕ್ಷಿಣ ಒಳನಾಡಿನ ವಿವಿಧ ಭಾಗದಲ್ಲಿ ಧಾರಾಕಾರ ಮಳೆ ಆಗುತ್ತಿದೆ. ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಶಿವಮೊಗ್ಗದಲ್ಲಿ ಮಳೆ ಆರ್ಭಟ ಜೋರಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ದಾವಣಗೆರೆ, ರಾಮನಗರ, ಬಳ್ಳಾರಿ, ಮೈಸೂರು, ಮಂಡ್ಯ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಮಳೆ ಅಬ್ಬರ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ತಿಳಿಸಿದೆ.







