ವಿಜಯಪುರ ಕೆನರಾ ಬ್ಯಾಂಕ್ ದರೋಡೆ ಪ್ರಕರಣ| ಬ್ಯಾಂಕ್ ಮ್ಯಾನೇಜರ್ ಸೇರಿ ಮೂವರ ಬಂಧನ

ಸಮಗ್ರ ನ್ಯೂಸ್: ವಿಜಯಪುರ ಜಿಲ್ಲೆಯ ಮನಗೂಳಿ ಕೆನರಾ ಬ್ಯಾಂಕ್ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಸ್ಟರ್ ಮೈಂಡ್ ಸೇರಿದಂತೆ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

Ad Widget . Ad Widget . Ad Widget .

ಪ್ರಕರಣ ಸಂಬಂಧ ಮನಗೂಳಿ ಕೆನರಾ ಬ್ಯಾಂಕ್ ಹಿಂದಿನ ವ್ಯವಸ್ಥಾಪಕ ಹಾಗೂ ಹಾಲಿ ಹುಬ್ಬಳ್ಳಿಯ ಗದಗ ರೋಡ್ ನ ಕೊಠಾರಿ ನಗರದ ಕೆನರಾ ಬ್ಯಾಂಕ್ ಹಿರಿಯ ವ್ಯವಸ್ಥಾಪಕ ವಿಜಯ್ ಕುಮಾರ್ ಮಿರಿಯಾಲ (41), ಹುಬ್ಬಳ್ಳಿಯ ಜನತಾ ಕಾಲೋನಿ
ಉದ್ಯೋಗಿ ಚಂದ್ರಶೇಖರ್ ನೆರೆಲ್ಲಾ (38) ಹುಬ್ಬಳ್ಳಿ ಚಾಲುಕ್ಯ ನಗರದ ಸುನೀಲ್ ಮೋಕಾ (40) ಎಂಬುವವರನ್ನು ಬಂಧಿಸಲಾಗಿದೆ.

Ad Widget . Ad Widget .

ಬಂಧಿತರಿಂದ 10.75 ಕೋಟಿ ಮೌಲ್ಯದ 10.5 ಕೆಜಿ ಚಿನ್ನಾಭರಣ, ಬಂಗಾರದ ಗಟ್ಟಿ, ಕೃತ್ಯಕ್ಕೆ ಬಳಸಿದ್ದ ಎರಡು ಕಾರುಗಳನ್ನು ಜಪ್ತಿ ಮಾಡಲಾಗಿದೆ. ಉಳಿದ ಆರೋಪಿಗಳಿಗಾಗಿ ಶೋಧಕಾರ್ಯ ಮುಂದುವರೆದಿದೆ ಎಂದು ವಿಜಯಪುರ ಎಸ್ ಪಿ ಲಕ್ಷ್ಮಣ ನಿಂಬರಗಿ ತಿಳಿಸಿದ್ದಾರೆ.

Leave a Comment

Your email address will not be published. Required fields are marked *