ಪುತ್ತೂರು: ಸಹಪಾಠಿಯಿಂದ ಗರ್ಭಿಣಿಯಾದ ಪ್ರಕರಣ| ಗಂಡು ಮಗುವಿಗೆ ಜನ್ಮ ನೀಡಿದ ಯುವತಿ

ಸಮಗ್ರ ನ್ಯೂಸ್: ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ, ಆಕೆ ಗರ್ಭವತಿಯಾದ ಬಳಿಕ ವಿವಾಹವಾಗಲು ನಿರಾಕರಿಸಿದ ಪ್ರಕರಣದಲ್ಲಿ ಗರ್ಭಿಣಿ ವಿದ್ಯಾರ್ಥಿನಿ ಶುಕ್ರವಾರ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಮಗುವಿಗೆ ಜನ್ಮ ನೀಡಿದ್ದಾಳೆ ಎನ್ನುವ ಮಾಹಿತಿ ಲಭಿಸಿದೆ.

Ad Widget ... ..

ವಿದ್ಯಾರ್ಥಿನಿ ಗರ್ಭಿಣಿ ಪ್ರಕರಣಕ್ಕೆ ಸಂಬಂಧಿಸಿ ಬಪ್ಪಳಿಗೆ ನಿವಾಸಿ ಕೃಷ್ಣ ಜೆ. ರಾವ್‌ (21) ವಿರುದ್ಧ ಈಗಾಗಲೇ ಮಹಿಳಾ ಠಾಣೆಯಲ್ಲಿ ಅತ್ಯಾಚಾರ ಮತ್ತು ನಂಬಿಕೆ ದ್ರೋಹದ ಪ್ರಕರಣ ದಾಖಲಾಗಿದೆ. ಪ್ರಕರಣ ದಾಖಲಾಗುತ್ತಲೇ ಆರೋಪಿ ತಲೆ ಮರೆಸಿಕೊಂಡಿದ್ದಾನೆ.

Ad Widget

ಸಂತ್ರಸ್ತೆ (21) ಪುತ್ತೂರು ನಗರ ಸಭೆಯ ನಿವಾಸಿಯಾಗಿದ್ದು, ಮಂಗಳೂರಿನ ಕಾಲೇಜೊಂದರಲ್ಲಿ ಪದವಿ ವ್ಯಾಸಂಗ ಮಾಡುತ್ತಿದ್ದಾರೆ. ಶುಕ್ರವಾರ ಹೆರಿಗೆ ನೋವು ಕಾಣಿಸಿಕೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿತ್ತು.

Leave a Comment

Your email address will not be published. Required fields are marked *