ಮಲೆಮಹದೇಶ್ವರ ಬೆಟ್ಟದಲ್ಲಿ ಐದು ಹುಲಿಗಳಿಗೆ ವಿಷವಿಕ್ಕಿ ಕೊಲೆ| ಮತ್ತೊಂದು ಹುಲಿಯೂ ಸಾವು

ಸಮಗ್ರ ನ್ಯೂಸ್: ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆದ ಹುಲಿಗಳ ಹತ್ಯಾಕಾಂಡ ಸದ್ಯ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಹಸುಗಳನ್ನ ಬೇಟೆಯಾಡಿ ತಿಂದಿದ್ದಕ್ಕೆ ವಿಷಪ್ರಾಶನ ಮಾಡಿ ಹುಲಿಗಳನ್ನ ಕೊಂದಿರೋ ಆರೋಪ ಕೇಳಿಬಂದಿದೆ. ವಿಷವಿಟ್ಟವರು ಯಾರು ಅನ್ನೋದು ಇನ್ನೂ ಗೊತ್ತಾಗಿಲ್ಲ.

Ad Widget . Ad Widget . Ad Widget . Ad Widget . Ad Widget . Ad Widget .

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಹೂಗ್ಯಂ ವಲಯದ ಮೀಣ್ಯಂ ಸಮೀಪ ಗುರುವಾರ ಬೆಳಗ್ಗೆ ಐದು ಹುಲಿಗಳು ಅಸಹಜವಾಗಿ ಸಾವನ್ನಪ್ಪಿದ ಘಟನೆಗೆ ಸಂಬಂಧಿಸಿದಂತೆ ಸಮೀಪದ ಗ್ರಾಮವೊಂದರ ಐವರು ದನಗಾಹಿಗಳನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಈಗಾಗಲೇ ಐದು ಹುಲಿಗಳ ಅಂತ್ಯಕ್ರಿಯೆ ಮಾಡಲಾಗಿದೆ. ಈ ಮಧ್ಯೆ ಜಿಲ್ಲೆಯ ಬಂಡೀಪುರದ ಗುಂಡ್ರೆ ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿ ಹೆಣ್ಣು ಹುಲಿಯೊಂದು ಸಾವನ್ನಪ್ಪಿದೆ.

4-5 ವರ್ಷದ ಹೆಣ್ಣು ಹುಲಿ ಸಹಜವಾಗಿ ಮೃತಪಟ್ಟಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಶುಕ್ರವಾರ ಅರಣ್ಯ ಸಿಬ್ಬಂದಿ ಗಸ್ತು ತಿರುಗುವ ವೇಳೆ ಕಳೇಬರ ಪತ್ತೆ ಆಗಿದೆ. ಇಂದು ವೈದ್ಯರು ಹುಲಿ ಮರಣೋತ್ತರ ಪರೀಕ್ಷೆ ನಡೆಸಲಿದ್ದಾರೆ.

Leave a Comment

Your email address will not be published. Required fields are marked *