ಕೇರಳದ ಶಾಲೆಗಳಲ್ಲಿ ಲಾಸ್ಟ್ ಬೆಂಚ್ ಮಾದರಿಗೆ ಗೇಟ್ ಪಾಸ್| ಕರ್ನಾಟಕದಲ್ಲೂ U ಮಾದರಿ ಅಳವಡಿಕೆಗೆ ಶಿಕ್ಷಣ ಸಚಿವರಿಗೆ ಪತ್ರ

ಸಮಗ್ರ ನ್ಯೂಸ್: ಇನ್ಮುಂದೆ ಶಾಲೆಗಳಲ್ಲಿ ಲಾಸ್ಟ್ ಬೆಂಚ್, ಫಸ್ಟ್ ಬೆಂಚ್​ ವಿದ್ಯಾರ್ಥಿಗಳು ಎಂಬ ವಿಧಾನಕ್ಕೆ ಬ್ರೇಕ್ ಬೀಳುವ ಸಾಧ್ಯತೆ ಇದೆ. ಸಿನಿಮಾ ಒಂದರ ಪ್ರೇರಣೆ ಪಡೆದು ಈಗಾಗಲೇ ಕೇರಳದಲ್ಲಿನ ಶಾಲೆಗಳಲ್ಲಿ ಅರ್ಧವೃತ್ತಾಕಾರದಲ್ಲಿ ಕುಳಿತುಕೊಳ್ಳುವ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ.

Ad Widget ... ..

ಇದೀಗ ಇದೇ ಮಾದರಿಯನ್ನು ಕರ್ನಾಟಕದ ಶಾಲೆಗಳಲ್ಲಿಯೂ ಜಾರಿ ಮಾಡುವಂತೆ ಒತ್ತಾಯ ಕೇಳಿ ಬರುತ್ತಿದೆ. ಈ ಕುರಿತಾಗಿ ಮಕ್ಕಳ ಹಕ್ಕುಗಳ ಹೋರಾಟಗಾರರು ಶಿಕ್ಷಣ ಸಚಿವ ಮಧು ಬಂಗಾರಪ್ಪಗೆ ಪತ್ರದ ಮೂಲಕ ಮನವಿ ಮಾಡಿದ್ದಾರೆ.

Ad Widget

ಕೇರಳದಲ್ಲಿನ ಶಾಲೆಗಳಲ್ಲಿ ಲಾಸ್ಟ್ ಬೆಂಚ್ ಹಾಗೂ ಫಸ್ಟ್ ಬೆಂಚ್ ಎಂಬ ಆಸನದ ವ್ಯವಸ್ಥೆಗೆ ಬದಲಾವಣೆ ತರಲಾಗಿದೆ. ಇದೇ ಮಾದರಿಯನ್ನ ನಮ್ಮ ಶಾಲೆಗಳಲ್ಲಿಯೂ ಜಾರಿ ಮಾಡುವಂತೆ ಮಕ್ಕಳ ಹಕ್ಕುಗಳ ಆಯೋಗ ಶಿಕ್ಷಣ ಸಚಿವ ಮಧು ಬಂಗಾರಪ್ಪಗೆ ಪತ್ರ ಬರೆದಿದ್ದು, ರಾಜ್ಯದ ಪ್ರತಿ ಶಾಲೆಯಲ್ಲೂ ವಿದ್ಯಾರ್ಥಿಗಳು ಅರ್ಧ ವೃತ್ತಕಾರದಲ್ಲಿ ಕುಳಿತು ಶಿಕ್ಷಣ ಪಡೆಯುವುದನ್ನು ಜಾರಿ ಮಾಡಲು ಮನವಿ ಮಾಡಿದೆ.

ಕೇರಳದ ಶಾಲೆಗಳಲ್ಲಿ ಅರ್ಧವೃತ್ತಾಕಾರದ ಕುಳಿತುಕೊಳ್ಳುವ ವ್ಯವಸ್ಥೆಯನ್ನು ಪ್ರೋತ್ಸಾಹಿಸಲಾಗುತ್ತಿದೆ. ಈ ಮಾದರಿ ಕಲಿಕೆಯ ಪರಿಣಾಮಕಾರಿತ್ವ ಹೆಚ್ಚಿಸಿದೆ. ಶಿಕ್ಷಕರು ಮತ್ತು ವಿದ್ಯಾರ್ಥಿಗಳ ಸಂವಾದವನ್ನು ಸುಧಾರಿಸುವಲ್ಲಿ ಕ್ರಾಂತಿಕಾರಿ ಬದಲಾವಣೆಯಾಗಿದೆ. ಅರ್ಧವೃತ್ತಾಕಾರದ ವಿಧಾನದಲ್ಲಿ ಎಲ್ಲ ವಿದ್ಯಾರ್ಥಿಗಳೂ ಶಿಕ್ಷಕರಿಗೆ ಒಂದೇ ದೃಷ್ಟಿಯಲ್ಲಿ ಕಾಣಿಸುತ್ತಾರೆ. ಇದು ಸಮಾನತೆಯ ಭಾವನೆಯನ್ನು ಮೂಡಿಸುತ್ತದೆ ಮತ್ತು ಎಲ್ಲರಿಗೂ ಸಮಾನವಾಗಿ ಭಾಗವಹಿಸುವ ಅವಕಾಶವನ್ನು ಒದಗಿಸುತ್ತದೆ. ಹೀಗಾಗಿ ರಾಜ್ಯದ ಶಾಲೆಗಳಲ್ಲಿ ಈ ನಿಯಮ ಜಾರಿಗೆ ಒತ್ತಾಯ ಕೇಳಿ ಬಂದಿದೆ.

ಅರ್ಧವೃತ್ತಾಕಾರದಲ್ಲಿ ಕುಳಿತುಕೊಳ್ಳುವ ವ್ಯವಸ್ಥೆ ಶಾಲೆಗಳಲ್ಲಿ ಕಲಿಕೆಯ ಪರಿಣಾಮಕಾರಿತ್ವವನ್ನು ಹೆಚ್ಚಿಸಲು ತುಂಬಾ ಪರಿಣಾಮಕಾರಿಯಾಗಿದೆ. ಶಿಕ್ಷಣ ವಿಧಾನಗಳಷ್ಟೇ ಅಲ್ಲ, ತರಗತಿಯ ವಾತಾವರಣ ಮತ್ತು ಕುಳಿತುಕೊಳ್ಳುವ ವಿಧಾನವೂ ಮಹತ್ವದ ಪಾತ್ರ ವಹಿಸುತ್ತದೆ. ವಿದ್ಯಾರ್ಥಿಗಳ ಕಲಿಕೆಯ ಗುಣಮಟ್ಟ, ಸಾಮಾಜಿಕ ಕೌಶಲ್ಯಗಳು ಮತ್ತು ಶಿಕ್ಷಕ-ವಿದ್ಯಾರ್ಥಿ ಸಂವಾದವನ್ನು ಸುಧಾರಿಸುವಲ್ಲಿ ಈ ವಿಧಾನ ಕ್ರಾಂತಿಕಾರಿ ಬದಲಾವಣೆ ತರುವ ಸಾಧ್ಯತೆ ಇದೆ.

Leave a Comment

Your email address will not be published. Required fields are marked *