ಮುಷ್ಕರಕ್ಕೆ ಮುಂದಾದ ಸಾರಿಗೆ ನೌಕರರಿಗೆ ಎಸ್ಮಾ ಜಾರಿ

ಸಮಗ್ರ ನ್ಯೂಸ್: ವೇತನ ಪರಿಷ್ಕರಣೆ, ಹಿಂಬಾಕಿ ನೀಡುವುದು ಸೇರಿದಂತೆ ಸಾರಿಗೆ ನಿಗಮಗಳ ನೌಕರರ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಆಗಸ್ಟ್ 5 ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ನಿರ್ಧರಿಸಿದೆ.

Ad Widget ... .. Ad Widget .

ಮುಷ್ಕರಕ್ಕೆ ಮುಂದಾಗಿದ್ದ ಸಾರಿಗೆ ನೌಕರರಿಗೆ ಕೆಎಸ್‌ಆರ್ಟಿಸಿ ಶಾಕ್ ನೀಡಿದೆ. ಪ್ರತಿಭಟನೆ ನಡೆಸದಂತೆ ಕೆಎಸ್‌ಆರ್ಟಿಸಿ ವತಿಯಿಂದ ಎಸ್ಮಾ ಜಾರಿ ಮಾಡಲಾಗಿದೆ.

Ad Widget

ಕರ್ನಾಟಕ ಅಗತ್ಯ ಸೇವಾ ನಿರ್ವಹಣಾ ಕಾಯ್ದೆ 2013ರ ಅಡಿ ಎಸ್ಮಾ ಜಾರಿ ಮಾಡಿದ್ದು, 5 ತಿಂಗಳು ಯಾವುದೇ ಮುಷ್ಕರದಲ್ಲಿ ಭಾಗಿಯಾಗದಂತೆ ಎಸ್ಮಾ ಜಾರಿಗೊಳಿಸಲಾಗಿದೆ. ಡಿಸೆಂಬರ್ 31ರವರೆಗೆ ನಿಗಮದಲ್ಲಿ ಮುಷ್ಕರ ನಿರ್ಬಂಧಿಸಿ ಅಧಿಸೂಚನೆ ಹೊರಡಿಸಲಾಗಿದೆ.

Leave a Comment

Your email address will not be published. Required fields are marked *