ಧರ್ಮಸ್ಥಳ ಸರಣಿ ಹತ್ಯೆ‌,‌ ಅಂತ್ಯಸಂಸ್ಕಾರ ಪ್ರಕರಣ| ಸದ್ಯಕ್ಕೆ‌ ಎಸ್ಐಟಿ ರಚನೆ ಮಾಡಲ್ಲ ಎಂದ ಸಿಎಂ

ಸಮಗ್ರ ನ್ಯೂಸ್: ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಅತ್ಯಾಚಾರ, ಸರಣಿ ಹತ್ಯೆ, ಸಾಮೂಹಿಕ ಅಂತ್ಯಸಂಸ್ಕಾರ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಧರ್ಮಸ್ಥಳದಲ್ಲಿ ಅಪರಿಚಿತ ಶವಗಳ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ರಚನೆ ಮಾಡುತ್ತೀರಾ ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ಸದ್ಯಕ್ಕೆ ಈ ವಿಚಾರವಾಗಿ ಎಸ್‌ಐಟಿ ರಚನೆ ಮಾಡಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

Ad Widget . Ad Widget . Ad Widget . Ad Widget . Ad Widget . Ad Widget .

ಜುಲೈ 12ರಂದು ಮಾಧ್ಯಮಗಳಲ್ಲಿ ಪ್ರಸಾರವಾದ ವರದಿಗಳ ಪ್ರಕಾರ, ಒಂದು ತಲೆಬುರುಡೆ ದೊರೆತಿದ್ದು, ವೈದ್ಯಕೀಯ ವಿದ್ಯಾರ್ಥಿನಿ ನಾಪತ್ತೆಯ ಬಗ್ಗೆ ಕುಟುಂಬದವರ ಹೇಳಿಕೆಯೂ ಗಮನಾರ್ಹವಾಗಿದೆ. ಮಹಿಳಾ ಆಯೋಗವು ಈ ಪ್ರಕರಣವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದು, ಪೊಲೀಸ್ ಠಾಣೆಗಳು ಈ ಹಿಂದಿನ ನಾಪತ್ತೆ ಮತ್ತು ಸಾವು ಪ್ರಕರಣಗಳಿಗೆ ಸೂಕ್ತವಾಗಿ ಸ್ಪಂದಿಸಿಲ್ಲ ಎಂಬ ಗಂಭೀರ ಆರೋಪಗಳನ್ನೂ ಗುರುತಿಸಿದೆ.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಕಳೆದ 20 ವರ್ಷಗಳಲ್ಲಿ ಧರ್ಮಸ್ಥಳ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ವರದಿಯಾಗಿರುವ ನಾಪತ್ತೆಯಾದ ಮಹಿಳೆಯರು, ವಿದ್ಯಾರ್ಥಿನಿಯರು, ಅಸ್ವಾಭಾವಿಕ ಸಾವು, ಕೊಲೆ ಹಾಗೂ ಅತ್ಯಾಚಾರ ಪ್ರಕರಣಗಳ ಸಮಗ್ರ ತನಿಖೆಗಾಗಿ ಹಿರಿಯ ಪೊಲೀಸ್ ಅಧಿಕಾರಿಗಳ ನೇತೃತ್ವದಲ್ಲಿ ಎಸ್​ಐಟಿ ರಚನೆಯ ಅಗತ್ಯವಿದೆ ಎಂದು ನಾಗಲಕ್ಷ್ಮಿ ಚೌಧರಿ ಅವರು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ.

Leave a Comment

Your email address will not be published. Required fields are marked *