ಧರ್ಮಸ್ಥಳ: ಹರಿದ ರವಿಕೆ, ಪಾನ್ ಕಾರ್ಡ್, ಎಟಿಎಂ ಸಿಕ್ಕಿದೆ| ವಕೀಲ‌ ಮಂಜುನಾಥ್ ಪತ್ರಿಕಾ ಪ್ರಕಟಣೆ

ಸಮಗ್ರ ನ್ಯೂಸ್: ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಹಿಂದೆ ಅಪರಾಧ ಕೃತ್ಯಗಳಿಗೆ ಸಂಬಂಧಿಸಿ ಹೂತು ಹಾಕಲಾಗಿದೆ ಎನ್ನಲಾದ ಪ್ರಕರಣ ಸಂಬಂಧ ದೂರುದಾರ ಗುರುತು ಪಡಿಸಿದ ಸ್ಥಳಗಳ ಪೈಕಿ ಮೊದಲನೇ ಗುರುತಿನ ಸ್ಥಳವನ್ನು ಅಗೆಯುವ ವೇಳೆ ಎರಡು ಕಾರ್ಡ್‌ ಮತ್ತು ಹರಿದ ರವಿಕೆ ಪತ್ತೆಯಾಗಿವೆ ಎಂದು ಅನನ್ಯಾ ಭಟ್ ಅವರ ತಾಯಿ ಸುಜಾತಾ ಭಟ್ ಅವರ ಪರ ವಕೀಲ ಮಂಜುನಾಥ್ ಎನ್ ತಿಳಿಸಿರುವುದಾಗಿ ವರದಿಯಾಗಿದೆ.

Ad Widget ... ..

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಎಸ್ಐಟಿಯ ಕಾರ್ಯಾಚರಣೆಯು ಪ್ರಕರಣದಲ್ಲಿ ಹೊಸ ಬೆಳವಣಿಗೆಗೆ ದಾರಿ ತೆರೆದಿದೆ. ನಿನ್ನೆ ಮಂಗಳವಾರದ ಕಾರ್ಯಚರಣೆಯ ವೇಳೆ ಸುಮಾರು 2.5 ಅಡಿ ಆಳದಲ್ಲಿ ಕೆಂಪು ಬಣ್ಣದ ರವಿಕೆ, ಪಾನ್ ಕಾರ್ಡ್ ಕಾರ್ಡ್ ಹಾಗೂ ಎಟಿಎಂ ಕಾರ್ಡ್ ಪತ್ತೆಯಾಗಿದೆ ಎಂದು ಮೂಲಗಳು ತಿಳಿಸಿವೆ. ಈ ಬೆಳವಣಿಗೆಯು ತನಿಖೆಗೆ ಹೊಸ ಆಯಾಮ ನೀಡಿದೆ ಎಂದು ಅವರು ಹೇಳಿದ್ದಾರೆ.

Ad Widget

ಹೇಳಿಕೆಯಲ್ಲಿ ಏನಿದೆ?
ಸೈಟ್ ಸಂಖ್ಯೆ 1 ರಲ್ಲಿ ಸುಮಾರು 2.5 ಅಡಿ ಆಳದಲ್ಲಿ ಹರಿದ ಕೆಂಪು ರವಿಕೆ, ಪ್ಯಾನ್ ಕಾರ್ಡ್ ಮತ್ತು ಎಟಿಎಂ ಕಾರ್ಡ್ ಪತ್ತೆಯಾಗಿದೆ. ಒಂದು ಕಾರ್ಡ್‌ನಲ್ಲಿ ಪುರುಷನ ಹೆಸರು ಇದ್ದರೆ ಇನ್ನೊಂದು ಕಾರ್ಡ್‌ನಲ್ಲಿ ಲಕ್ಷ್ಮಿ ಎಂಬ ಮಹಿಳೆಯ ಹೆಸರು ಇದೆ. ಸಾಕ್ಷ್ಯಗಳು ಸಿಕ್ಕಿದ ಕಾರಣ ನಮಗೆ ಹೊಸ ಭರವಸೆ ಮೂಡಿದೆ. ನಾವು ಎಸ್‌ಐಟಿ ಅವರ ಕೆಲಸದಲ್ಲಿ ಸಂಪೂರ್ಣ ನಂಬಿಕೆ ಇಟ್ಟಿದ್ದೇವೆ. ವಿಶೇಷ ತನಿಖಾ ತಂಡ ಶ್ಲಾಘನೀಯ ಕೆಲಸ ಮಾಡುತ್ತಿದೆ ಎಂದಿದೆ.

Leave a Comment

Your email address will not be published. Required fields are marked *