ಧರ್ಮಸ್ಥಳ ಪ್ರಕರಣದ ಸುದ್ದಿ ಪ್ರಸಾರಕ್ಕೆ ಮಾಧ್ಯಮ ನಿರ್ಬಂಧ ತೆರವು| ಪ್ರತಿಬಂಧಕ ಆದೇಶ ರದ್ದುಗೊಳಿಸಿದ ಹೈಕೋರ್ಟ್

ಸಮಗ್ರ ನ್ಯೂಸ್ : ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂಳಲಾಗಿದೆ ಎಂಬ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿ.ಹರ್ಷೇಂದ್ರ ಕುಮಾರ್ ಅವರ ಬಗ್ಗೆ ಯಾವುದೇ ಸುದ್ದಿ ಪ್ರಸಾರ/ಪ್ರಕಟ ಮಾಡದಂತೆ ಮಾಧ್ಯಮಗಳನ್ನು ನಿರ್ಬಂಧಿಸಿ ವಿಚಾರಣಾ ನ್ಯಾಯಾಲಯ ಹೊರಡಿಸಿದ್ದ ಏಕಪಕ್ಷೀಯ ಪ್ರತಿಬಂಧಕಾದೇಶವನ್ನು ಹೈಕೋರ್ಟ್‌ ವಜಾಗೊಳಿಸಿದೆ.

Ad Widget . Ad Widget . Ad Widget . Ad Widget . Ad Widget .

ಮಾಧ್ಯಮಗಳನ್ನು ನಿರ್ಬಂಧಿಸಿ ವಿಚಾರಣಾ ನ್ಯಾಯಾಲಯ ಹೊರಡಿಸಿದ್ದ ಪ್ರತಿಬಂಧಕಾದೇಶ ಪ್ರಶ್ನಿಸಿ ದಕ್ಷಿಣ ಕನ್ನಡದ ‘ಕುಡ್ಲ ರ‍್ಯಾಂಪೇಜ್‌’ ಯೂಟ್ಯೂಬ್ ಚಾನಲ್‌ನ ಪ್ರಧಾನ ಸಂಪಾದಕ ಅಜಯ್‌ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ, ಅರ್ಜಿಯನ್ನು ಭಾಗಶಃ ಪುರಸ್ಕರಿಸಿದೆ.

Ad Widget . Ad Widget .

ಕುಡ್ಲ ರ‍್ಯಾಂಪೇಜ್‌ ಪ್ರಧಾನ ಸಂಪಾದಕ ಅಜಯ್‌ ಸಲ್ಲಿಸಿರುವ ಅರ್ಜಿಯನ್ನು ಭಾಗಶಃ ಪುರಸ್ಕರಿಸಲಾಗಿದೆ. 2025ರ ಜುಲೈ 8ರಂದು ವಿಚಾರಣಾ ನ್ಯಾಯಾಲಯ ಹೊರಡಿಸಿರುವ ಏಕಪಕ್ಷೀಯ ಪ್ರತಿಬಂಧಕಾದೇಶವನ್ನು ವಜಾಗೊಳಿಸಲಾಗಿದೆ. ಮಧ್ಯಂತರ ಅರ್ಜಿಯನ್ನು ಹೊಸದಾಗಿ ಪರಿಗಣಿಸಲು ಪ್ರಕರಣವನ್ನು ಸಕ್ಷಮ ನ್ಯಾಯಾಲಯಕ್ಕೆ ವಾಪಸ್‌ ಕಳುಹಿಸಲಾಗುತ್ತಿದೆ. ವಿಚಾರಣಾ ನ್ಯಾಯಾಲಯವು ಈ ಆದೇಶದಲ್ಲಿ ಮಾಡಿರುವ ಅಂಶಗಳನ್ನು ಗಮನದಲ್ಲಿಟ್ಟುಕೊಳ್ಳಬೇಕು. ಸಕ್ಷಮ ನ್ಯಾಯಾಲಯ ಮಧ್ಯಂತರ ಅರ್ಜಿಯನ್ನು ತುರ್ತಾಗಿ ನಿರ್ಧರಿಸಬೇಕು. ಸಿವಿಲ್‌ ದಾವೆ, ಕ್ರಿಮಿನಲ್‌ ಪ್ರಕ್ರಿಯೆ, ಆರೋಪ, ಪ್ರತ್ಯಾರೋಪದ ಮೇಲೆ ಈ ನ್ಯಾಯಾಲಯವು ಯಾವುದೇ ಅಭಿಪ್ರಾಯ ವ್ಯಕ್ತಪಡಿಸಿಲ್ಲ. ಆದೇಶದಲ್ಲಿ ಪರಿಗಣಿಸಿರುವ ಒಂದು ಅಂಶವನ್ನು ಹೊರತುಪಡಿಸಿ ಪಕ್ಷಕಾರರ ನಡುವೆ ಎಲ್ಲ ವಾದಗಳನ್ನು ಮುಕ್ತವಾಗಿರಿಸಲಾಗಿದೆ ಎಂದು ನ್ಯಾಯಾಲಯ ಆದೇಶಿಸಿದೆ.

ಈ ಆದೇಶದಲ್ಲಿ ಉಲ್ಲೇಖಿಸಿರುವ ಅಂಶಗಳ ಹಿನ್ನೆಲೆಯಲ್ಲಿ ಅರ್ಜಿದಾರರು ಮತ್ತು ಇತರ ಎಲ್ಲ ಪಕ್ಷಕಾರರು ಸಕ್ಷಮ ನ್ಯಾಯಾಲಯಕ್ಕೆ ಆದೇಶ ಮಾಡಲು ಎಲ್ಲ ರೀತಿಯ ಸಹಕಾರ ನೀಡಬೇಕು ಎಂದು ನ್ಯಾಯಾಲಯ ನಿರ್ದೇಶಿಸಿದೆ. ವಿಸ್ತೃತ ಆದೇಶ ಪ್ರತಿ ಇನ್ನಷ್ಟೇ ಲಭ್ಯವಾಗಬೇಕಿದೆ.

Leave a Comment

Your email address will not be published. Required fields are marked *