ಉಡುಪಿ: ಕಾಂತಾರ ಖ್ಯಾತಿಯ ಹಿರಿಯ ನಟ ಪ್ರಭಾಕರ ಕಲ್ಯಾಣಿ ನಿಧನ

ಸಮಗ್ರ ನ್ಯೂಸ್: ಕಾಂತಾರ ಚಿತ್ರದಲ್ಲಿ ಕಾಣಿಸಿಕೊಂಡಿದ್ದ ಖ್ಯಾತ ನಟ ಮತ್ತು ರಂಗಭೂಮಿ ಕಲಾವಿದ ಟಿ ಪ್ರಭಾಕರ್ ಕಲ್ಯಾಣಿ ಹೃದಯಾಘಾತದಿಂದ ಹಿರಿಯಡ್ಕದಲ್ಲಿರುವ ತಮ್ಮ ನಿವಾಸದಲ್ಲಿ ಕುಸಿದು ಬಿದ್ದು ನಿಧನರಾಗಿದ್ದಾರೆ.

Ad Widget ... ..

ಕಳೆದ 3 ದಿನಗಳ ಹಿಂದೆ ಹಿರಿಯಡಕ ಪೇಟೆಯಲ್ಲಿ ತಲೆ ಸುತ್ತಿ ಬಿದ್ದಿದ್ದರು. ಇಂದು ಮಲಗಿದಲ್ಲಿಯೇ ಹೃದಯಘಾತದಿಂದ ನಿಧನರಾಗಿದ್ದಾರೆ. 5 ವರ್ಷದ ಹಿಂದೆ ಹೃದಯ ಶಸ್ತ್ರ ಚಿಕಿತ್ಸೆಗೆ ಒಳಗಾಗಿ ಸ್ಟಂಟ್ ಹಾಕಲಾಗಿತ್ತು. ಮೃತರು ರಂಗಭೂಮಿ ಕಲಾವಿದರಾಗಿದ್ದು, ಕಾಂತಾರ ಚಿತ್ರದಲ್ಲಿ ಕಲಾವಿದರಾಗಿ ಅಭಿನಯಿಸಿದ್ದಾರೆ.

Ad Widget

ಮೃತರು ಪತ್ನಿ, ಓರ್ವ ಪುತ್ರ, ಅನೇಕ ಬಂಧು-ಮಿತ್ರರನ್ನು ಅಗಲಿದ್ದಾರೆ. ರಂಗಭೂಮಿಯ ಬಗ್ಗೆ ಅಪಾರ ಆಸಕ್ತಿ ಹೊಂದಿದ್ದ ಪ್ರಭಾಕರ್, ವಿವಿಧ ರಂಗ ನಾಟಕಗಳಲ್ಲಿ ಸಕ್ರಿಯವಾಗಿ ಅಭಿನಯಿಸಿದ್ದರು. ಅವರ ಅಂತಿಮ ವಿಧಿವಿಧಾನಗಳನ್ನು ಶುಕ್ರವಾರ ಬೀಡಿನಗುಡ್ಡೆ ಸ್ಮಶಾನದಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬ ಮೂಲಗಳು ತಿಳಿಸಿದೆ.

Leave a Comment

Your email address will not be published. Required fields are marked *