ಬಂಡೀಪುರ: ಕಾಡಾನೆ‌ ಜೊತೆ ಸೆಲ್ಫಿ ವೇಳೆ ದಾಳಿ| ಸ್ವಲ್ಪದರಲ್ಲೇ ಪಾರಾದವನಿಗೆ ಬಿತ್ತು 25 ಸಾವಿರ ದಂಡ

ಸಮಗ್ರ ನ್ಯೂಸ್: ಬಂಡೀಪುರ ಅರಣ್ಯದೊಳಗೆ ಆನೆಯ ಮುಂದೆ ಸೆಲ್ಫಿ ತೆಗೆದುಕೊಳ್ಳಲು ಹೋಗಿ ಆನೆ ದಾಳಿಯಿಂದ ಪಾರಾಗಿದ್ದ ವ್ಯಕ್ತಿಗೆ ಅರಣ್ಯ ಇಲಾಖೆ ಶಾಕ್ ನೀಡಿದ್ದು, ಆತನ ಬಂಧಿಸಿ 25 ಸಾವಿರ ರೂ ದಂಡ ಹೇರಿದೆ.

Ad Widget ... ..

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದೊಳಗೆ ಹಾದುಹೋಗಿರುವ ಕೆಕ್ಕನಹಳ್ಳ ಪ್ರದೇಶದ ರಾಷ್ಟ್ರೀಯ ಹೆದ್ದಾರಿಯಲ್ಲಿ ಆನೆಯ ಮುಂದೆ ಸೆಲ್ಫಿ ತೆಗೆದುಕೊಳ್ಳಲು ಹೋಗಿ ಆನೆ ದಾಳಿಯಿಂದ ಗಾಯಗೊಂಡು ಪರಾರಿಯಾಗಿದ್ದ ಆರೋಪಿಯನ್ನು ಸೋಮವಾರ ಅರಣ್ಯ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದು 25,000 ರೂ ದಂಡ ವಿಧಿಸಿ ಮಾತ್ರವಲ್ಲದೆ ತಪ್ಪೊಪ್ಪಿಗೆ ಪತ್ರ ಪಡೆದಿದ್ದಾರೆ.

Ad Widget

ಕಾಡಾನೆ ಜೊತೆಗೆ ಉದ್ಧಟತನ ಪ್ರದರ್ಶಿಸಿದ್ದ ಆರೋಪಿ 50 ವರ್ಷದ ಆರ್‌.ಬಸವರಾಜ್‌ನನ್ನು ನಂಜನಗೂಡಿನ ನಿವಾಸದಲ್ಲಿ ವಶಕ್ಕೆ ಪಡೆದು ವಿಚಾರಣೆ ನಡೆಸಲಾಯಿತು. ತಿಳುವಳಿಕೆ ಕೊರತೆಯಿಂದ ಕೃತ್ಯ ಎಸಗಿರುವುದಾಗಿ ತಪ್ಪೊಪ್ಪಿಕೊಂಡಿದ್ದಾರೆ ಎಂದು ಬಂಡೀಪುರ ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ತಿಳಿಸಿದ್ದಾರೆ.

Leave a Comment

Your email address will not be published. Required fields are marked *