ಬೆಳ್ತಂಗಡಿ: ಇನ್ನೋವಾ ಕಾರಿನಲ್ಲಿ ಹಿಂಸಾತ್ಮಕವಾಗಿ ಗೋಸಾಗಾಟ| ವಾಹನ ಮತ್ತು ಆರೋಪಿ ಪೊಲೀಸ್ ವಶಕ್ಕೆ

ಸಮಗ್ರ ನ್ಯೂಸ್: ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯಲ್ಲಿ ಇನ್ನೋವಾ ಕಾರಿನಲ್ಲಿ ಹಿಂಸಾತ್ಮಕವಾಗಿ ದನ ಸಾಗಾಟ ಮಾಡುತ್ತಿದ್ದ ಪ್ರಕರಣವೊಂದು ಬುಧವಾರ ಬೆಳಕಿಗೆ ಬಂದಿದ್ದು ವಾಹನ ಹಾಗೂ ಒಬ್ಬ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Ad Widget ... ..

ಚಾರ್ಮಾಡಿ ಕಡೆಯಿಂದ ಅತಿ ವೇಗದಲ್ಲಿ ಬಂದ ಇನ್ನೋವಾ ಕಾರು ಹಲವು ವಾಹನಗಳಿಗೆ ಢಿಕ್ಕಿ ಹೊಡೆದಿದೆ ಎಂದು ಹೇಳಲಾಗುತ್ತಿದ್ದು, ಗುರುವಾಯಕೆರೆಯಲ್ಲಿ ವಾಹನವನ್ನು ಸ್ಥಳೀಯರು ಹಾಗೂ ಸ್ಥಳದಲ್ಲಿದ್ದ ಟ್ರಾಫಿಕ್ ಪೊಲೀಸರು ತಡೆದಿದ್ದಾರೆ.

Ad Widget

ಈ ವೇಳೆ ಕಾರಿನಲ್ಲಿದ್ದ ಇಬ್ಬರು ಪರಾರಿಯಾಗಿದ್ದಾರೆ ಎನ್ನಲಾಗಿದ್ದು, ಇನ್ನೋವಾ ಕಾರಿನಲ್ಲಿ ಮೂರು ದನಗಳನ್ನು ಹಿಂಸಾತ್ಮಕವಾಗಿ ತುಂಬಿಕೊಂಡು ಸಾಗಾಟ ಮಾಡಲಾಗುತ್ತಿತ್ತು. ಕಾರಿಗೆ ನಕಲಿ ನಂಬ‌ರ್ ಪ್ಲೇಟ್ ಅಂಟಿಸಿರುವುದು ಕಂಡುಬಂದಿದೆ. ಘಟನೆಯ ವೇಳೆ ಸ್ಥಳದಲ್ಲಿ ನೂರಾರು ಜನರು ಜಮಾಯಿಸಿದ್ದರು. ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

Leave a Comment

Your email address will not be published. Required fields are marked *