ಭಾರೀ ಮಳೆ ಹಿನ್ನಲೆ| ಉಡುಪಿ ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ಆ.19ರಂದು ರಜೆ ಘೋಷಣೆ

ಸಮಗ್ರ ನ್ಯೂಸ್: ಮಳೆಯ ತೀವ್ರತೆ ಹೆಚ್ಚಾಗಿರುವುದರಿಂದ ಹಾಗೂ ಹವಾಮಾನ ಇಲಾಖೆ ಮುನ್ಸೂಚನೆ ನೀಡಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಆ.19ರಂದು ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆ, ಪದವಿಪೂರ್ವ ಕಾಲೇಜು ಹಾಗೂ ಐಟಿಐ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಆದೇಶಿಸಿದ್ದಾರೆ.

Ad Widget ... ..

ಉಳಿದಂತೆ ಎಲ್ಲಾ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ ಹಾಗೂ ಇಂಜಿನಿಯರಿಂಗ್ ವಿದ್ಯಾರ್ಥಿ ಗಳಿಗೆ ರಜೆ ಇರುವುದಿಲ್ಲ, ತರಗತಿಗಳು ಎಂದಿನಂತೆ ನಡೆಯಲಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

Ad Widget

ಮುನ್ನೆಚ್ಚರಿಕೆ ಕ್ರಮವಾಗಿ, ಕಡಲತೀರಗಳು, ನದಿಗಳು ಮತ್ತು ಜಲಪಾತಗಳ ಬಳಿಗೆ ಹೋಗುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ ಮತ್ತು ಈ ಪ್ರದೇಶಗಳಲ್ಲಿ ಫೋಟೋಗಳು ಮತ್ತು ವೀಡಿಯೊಗಳನ್ನು ತೆಗೆದುಕೊಳ್ಳದಂತೆ ಸೂಚಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಉಡುಪಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ತುರ್ತು ಕ್ರಮಗಳನ್ನು ಕೈಗೊಂಡಿದೆ.

Leave a Comment

Your email address will not be published. Required fields are marked *