ಸಮಗ್ರ ನ್ಯೂಸ್: ಬೆಳ್ಳಂಬೆಳಗ್ಗೆ ಕಾಂಗ್ರೆಸ್ ಮುಖಂಡರಿಗೆ ಜಾರಿ ನಿರ್ದೇಶನಾಲಯ (ED) ಶಾಕ್ ಕೊಟ್ಟಿದ್ದು, ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ಹಾಗೂ ಸಹೋದರರ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಪಟ್ಟಣದಲ್ಲಿರುವ 4 ಮನೆಗಳು ಹಾಗೂ ಬೆಂಗಳೂರಿನ ಸಹಕಾರ ನಗರದಲ್ಲಿರುವ ನಿವಾಸದ ಮೇಲೆ ಇಡಿ ದಾಳಿ ನಡೆಸಿದೆ ಎಂದು ತಿಳಿದುಬಂದಿದೆ. ಇತ್ತ ಬೆಂಗಳೂರಿನ ರಾಜರಾಜೇಶ್ವರಿನಗರದ ಮುಖಂಡರಾದ ಕುಸುಮಾ ಮನೆ ಮೇಲೆ ದಾಳಿ ನಡೆಸಿದೆ.
ಕಾಂಗ್ರೆಸ್ ಶಾಸಕ ವಿರೇಂದ್ರ ಪಪ್ಪಿ ಅವರೊಂದಿಗೆ ಆರ್ಥಿಕ ವ್ಯವಹಾರ ಹೊಂದಿದ್ದ ಹಿನ್ನೆಲೆ ದಾಳಿ ಕುಸುಮಾ ನಿವಾಸದ ಮೇಲೆ ನಡೆಸಲಾಗಿದ್ದು, ಬೆಳಗ್ಗೆಯಿಂದಲೇ ಇಡಿ ಶೋಧ ಆರಂಭಿಸಿದೆ. ಕರ್ನಾಟಕದ ಬೆಂಗಳೂರು, ಚಳ್ಳಕೆರೆ, ಚಿತ್ರದುರ್ಗ ಹಾಗೂ ಗೋವಾ ಸೇರಿದಂತೆ 16 ಕಡೆಗಳಲ್ಲಿ ಇಂದು ಬೆಳ್ಳಂಬೆಳಗ್ಗೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಕಾಂಗ್ರೆಸ್ ಶಾಸಕ ವಿರೇಂದ್ರ ಪಪ್ಪಿ ಅವರಿಗೆ ಸೇರಿದ ಚಿತ್ರದುರ್ಗ ಮತ್ತು ಬೆಂಗಳೂರಿನ ಪ್ರೆಸ್ಟೀಜ್ ಎಡ್ವರ್ಡಿಯನ್ ಅಪಾರ್ಟ್ಮೆಂಟ್ ಫ್ಲಾಟ್ ಸೇರಿದಂತೆ ನಾಲ್ಕು ಮನೆಗಳ ಮೇಲೆ ಇಡಿ ತಂಡ ದಾಳಿ ನಡೆಸಿದೆ.







