ದ.ಕ ಜಿಲ್ಲೆಯಾದ್ಯಂತ ಗಣೇಶ ವಿಸರ್ಜನೆ ದಿನಗಳಂದು ಮದ್ಯ ಮಾರಾಟ ನಿಷೇಧ

ಸಮಗ್ರ ನ್ಯೂಸ್: ಗಣೇಶೋತ್ಸವ ಹಬ್ಬ ಆಗಸ್ಟ್ 26 ರಿಂದ ಪ್ರಾರಂಭವಾಗಿದ್ದು, ಗಣೇಶ ವಿಗ್ರಹಗಳನ್ನು ತಯಾರಿಸಿದ ಸ್ಥಳಗಳಿಂದ ವಿಜೃಂಭಣೆಯಿಂದ ಮೆರವಣಿಗೆಯಲ್ಲಿ ತಂದು ಪ್ರತಿಷ್ಠಾಪನೆ ಮಾಡಿ ನಂತರ ಗಣೇಶ ವಿಗ್ರಹಗಳನ್ನು ವಿಸರ್ಜನೆ ನಡೆಸುವ ತನಕ ಭಜನೆ, ಆರ್ಕೆಸ್ಟ್ರಾ, ವಾದ್ಯಗೋಷ್ಟಿ, ಸಭಾ/ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದೆ.

Ad Widget ... ..

ನಂತರ ನಿಗದಿತ ದಿನದಂದು ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆಯು ಪ್ರತಿಷ್ಠಾಪನಾ ಸ್ಥಳದಿಂದ ಭವ್ಯ ಮೆರವಣಿಗೆಯಲ್ಲಿ ಟ್ಯಾಬ್ಲೊ, ಚೆಂಡೆ, ಮುಂತಾದ ಸ್ತಬ್ಧ ಚಿತ್ರಗಳೊಂದಿಗೆ ಸಾಗಿ ನಂತರ ಬಾವಿ, ಕೆರೆ, ನದಿಗಳಲ್ಲಿ ವಿಸರ್ಜನೆ ನಡೆಸಲಿದ್ದು, ಕಾರ್ಯಕ್ರಮದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ಭಾಗವಹಿಸಲಿದ್ದಾರೆ.

Ad Widget

ದಕ್ಷಿಣ ಕನ್ನಡ ಜಿಲ್ಲಾ ಮತೀಯವಾಗಿ ಸೂಕ್ಷ್ಮ ಪ್ರದೇಶವಾಗಿರುವುದರಿಂದ ಶ್ರೀ ಗಣೇಶ ಮೂರ್ತಿ ಪ್ರಪ್ರತಿಷ್ಠಾಪನಾ ಮತ್ತು ವಿಸರ್ಜನೆ ಕಾರ್ಯಕ್ರಮ ನಡೆಯುವ ಸಮಯದಲ್ಲಿ ಕಿಡಿಗೇಡಿಗಳು ಅಮಲು ಪದಾರ್ಥ ಸೇವಿಸಿ ಅಹಿತಕರ ಘಟನೆಗಳಿಗೆ ಕಾರಣರಾಗಿ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ಉಂಟು ಮಾಡುವ ಸಾಧ್ಯತೆ ಇರುವುದರಿಂದ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಮಂಗಳೂರು ನಗರ ಪೆÇಲೀಸ್ ಕಮಿಷನರೇಟ್ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕ ವ್ಯಾಪ್ತಿಯಲ್ಲಿ ನಿಗದಿತ ದಿನಗಳಂದು ಬಾರ್ ಮತ್ತು ವೈನ್ ಶಾಪ್‍ಗಳಲ್ಲಿ, ಮದ್ಯದಂಗಡಿಗಳಲ್ಲಿ ಯಾವುದೇ ರೀತಿಯ ಅಮಲು ಪದಾರ್ಥ ಮಾರಾಟ ಮಾಡದಂತೆ ಎಲ್ಲಾ ರೀತಿಯ ಮದ್ಯದಂಗಡಿಗಳನ್ನು ಬಂದ್ ಮಾಡಲು ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಆದೇಶಿಸಿದ್ದಾರೆ.

Leave a Comment

Your email address will not be published. Required fields are marked *