ನಿರಂತರ 216 ಗಂಟೆಗಳ ಭರತನಾಟ್ಯ| ವಿಶ್ವದಾಖಲೆ ಬರೆದ ಉಡುಪಿಯ ವಿದುಷಿ ದೀಕ್ಷಾ

ಸಮಗ್ರ ನ್ಯೂಸ್: ಕಳೆದ 9 ದಿನಗಳಿಂದ ಒಟ್ಟು 216 ಗಂಟೆಗಳ ಕಾಲ ನಿರಂತರ ಭರತನಾಟ್ಯ ಪ್ರದರ್ಶಿಸುವ ಮೂಲಕ ವಿದುಷಿ ದೀಕ್ಷಾ ವಿ. ವಿಶ್ವ ದಾಖಲೆಯನ್ನು ಬರೆದಿದ್ದಾರೆ.

Ad Widget ... .. Ad Widget .

ಮಣಿಪಾಲ ರತ್ನ ಸಂಜೀವ ಕಲಾ ಮಂಡಲದ ನೇತೃತ್ವದಲ್ಲಿ ಬ್ರಹ್ಮಾವರ ಆರೂರು ಗ್ರಾಮದ ವಿದುಷಿ ದೀಕ್ಷಾ ಉಡುಪಿ ಅಜ್ಜರಕಾಡು ಡಾ.ಜಿ.ಶಂಕರ್ ಮಹಿಳಾ ಪದವಿ ಕಾಲೇಜಿನಲ್ಲಿ ಆ.21ರಂದು ಮಧ್ಯಾಹ್ನ 3.30ಗಂಟೆಗೆ ಆರಂಭಿಸಿದ ಭರತ ನಾಟ್ಯವನ್ನು ಆ.30ರ ಮಧ್ಯಾಹ್ನ 3.30ಕ್ಕೆ ಪೂರ್ಣಗೊಳಿಸಿದ್ದಾರೆ.

Ad Widget

ಈ ಮೂಲಕ ಅವರು ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್‌ನಲ್ಲಿ ಸ್ಥಾನ ಪಡೆದಿದ್ದಾರೆ. ಈ ಹಿಂದೆ ಮಂಗಳೂರಿನ ರೆಮೋನಾ ಎವೆಟ್ಟೆ ಪೆರೇರಾ 170 ಗಂಟೆಗಳ ಕಾಲ ನಿರಂತರ ಭರತನಾಟ್ಯ ಪ್ರದರ್ಶಿ ಸುವ ಮೂಲಕ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ದಾಖಲಿಸಿದ್ದರು. ಇದೀಗ ದೀಕ್ಷಾ ಈ ದಾಖಲೆಯನ್ನು ಮುರಿದು ಸಾಧನೆ ಮಾಡಿದ್ದಾರೆ.

Leave a Comment

Your email address will not be published. Required fields are marked *