ಧರ್ಮಸ್ಥಳ ಪ್ರಕರಣ| ಎಸ್ಐಟಿ ಕಚೇರಿಗೆ ಹಾಜರಾದ ಉದಯ ಜೈನ್

ಸಮಗ್ರ ನ್ಯೂಸ್: ಧರ್ಮಸ್ಥಳ ಪ್ರಕರಣದ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಕಾ ತಂಡದ (ಎಸ್‌ಐಟಿ) ಬೆಳ್ತಂಗಡಿ ಕಚೇರಿಗೆ ಧರ್ಮಸ್ಥಳದ ಉದಯ್ ಜೈನ್ ಬುಧವಾರ ಹಾಜರಾದರು.

. Ad Widget . Ad Widget . Ad Widget .

ಸುದ್ದಿಗಾರರ ಜೊತೆ ಮಾತನಾಡಿದ ಉದಯ್ ಜೈನ್, ‘ಬುಧವಾರ 11 ಗಂಟೆಗೆ ಕಚೇರಿಗೆ ಹಾಜರಾಗುವಂತೆ ಎಸ್ಐಟಿ ಅಧಿಕಾರಿಯೊಬ್ಬರು ನಿನ್ನೆ ದೂರವಾಣಿ ಕರೆ ಮಾಡಿ ತಿಳಿಸಿದ್ದರು. ಹಾಗಾಗಿ ಇಲ್ಲಿಗೆ ಬಂದಿದ್ದೇನೆ’ ಎಂದು ಹೇಳಿದರು.

. Ad Widget . Ad Widget . Ad Widget . Ad Widget . Ad Widget . Ad Widget . . Ad Widget . Ad Widget . Ad Widget . Ad Widget .

ಸೌಜನ್ಯ ಕೊಲೆ ಪ್ರಕರಣದ ಎಫ್‌ಐಆರ್ ನಲ್ಲಿ ನಮ್ಮ ಹೆಸರು ಇರಲಿಲ್ಲ. ಆದರೂ ನಮ್ಮನ್ನು ಆರೋಪಿಗಳನ್ನಾಗಿಸುವ ಷಡ್ಯಂತ್ರ ನಡೆದಿತ್ತು. ಸಿಬಿಐ ಮತ್ತು ಸಿಐಡಿ ಅಧಿಕಾರಿಗಳು ನಮ್ಮನ್ನು ವಿಚಾರಣೆಗೆ ಒಳಪಡಿಸಿದ್ದರು. ನಮ್ಮ ಮಂಪರು ಪರೀಕ್ಷೆಯನ್ನೂ ನಡೆಸಲಾಗಿತ್ತು. ಆ ಪ್ರಕರಣದಲ್ಲಿ ನಮ್ಮ ಪಾತ್ರ ಇಲ್ಲ ಎಂದು ಸಾಬೀತಾಗಿತ್ತು. ಈಗ ಎಸ್ಐಟಿಯವರು ಯಾವ ಪ್ರಕರಣ ಸಂಬಂಧ ವಿಚಾರಣೆಗೆ ಕರೆದಿದ್ದಾರೆ ಎಂದು ಗೊತ್ತಿಲ್ಲ. ನನ್ನಂತೆಯೇ, ಇನ್ನಿಬ್ಬರಿಗೂ ವಿಚಾರಣೆಗೆ ಹಾಜರಾಗುವಂತೆ ಎಸ್ಐಟಿಯವರು ಕರೆ ಮಾಡಿದ್ದಾರೆ ಎಂದರು.

Leave a Comment

Your email address will not be published. Required fields are marked *