ಧರ್ಮಸ್ಥಳ ಪ್ರಕರಣದಲ್ಲಿ ವಿದೇಶದಿಂದ ಫಂಡಿಂಗ್!? ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಎಂಟ್ರಿ ಸಾಧ್ಯತೆ

ಸಮಗ್ರ ನ್ಯೂಸ್: ಧರ್ಮಸ್ಥಳ ಗ್ರಾಮದಲ್ಲಿ ಶವಹೂತ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐಟಿ ತನಿಖೆ ನಡೆಯುತ್ತಿರುವಾಗಲೇ ಇದೀಗ ಕೇಂದ್ರ ತನಿಖಾ ಸಂಸ್ಥೆ ಇಡಿ ಎಂಟ್ರಿ ಕೊಟ್ಟಿದೆ. ಧರ್ಮಸ್ಥಳದ ವಿರುದ್ದ ನಡೆದ ಷಡ್ಯಂತ್ರದ ಕುರಿತಂತೆ ವಿದೇಶಿ ದೇಣಿಗೆಯ ಬಗ್ಗೆ ಇಡಿ ತನಿಖೆ ನಡೆಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

Ad Widget ... ..

ಧರ್ಮಸ್ಥಳ ಪ್ರಕರಣದ ತನಿಖೆ ನಡೆಯುತ್ತಿರುವ ನಡುವೆ ಈ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ( Enforcement Directorate (ED) ತನಿಖೆಗೆ ಎಂಟ್ರಿಯಾಗಿದೆ. ವಿದೇಶಿ NGO ಗಳಿಂದ ಹಣ ಫಂಡಿಂಗ್ ಆಗಿದೆಯಾ ಎಂಬ ಅನುಮಾನ ಹಿನ್ನೆಲೆಯಲ್ಲಿ ಒಡನಾಡಿ ಹಾಗೂ ಸಂವಾದ ಸಂಸ್ಥೆಗಳ ಅಕೌಂಟ್​ ಗಳ ಬಗ್ಗೆ ಇಡಿ ಮಾಹಿತಿ ಸಂಗ್ರಹ ಮಾಡುವ ಕೆಲಸ ಆರಂಭಿಸಿದೆ. ಹೀಗಾಗಿ ಕೆಲ ಅಕೌಂಟ್ ಗಳ ಮಾಹಿತಿ ನೀಡುವಂತೆ ಬ್ಯಾಂಕ್​​ಗೆ ಇಡಿ ಪತ್ರದ ಮೂಲಕ ಮನವಿ ಮಾಡಿದೆ.

Ad Widget

ಕಾನೂನು ಬಾಹಿರವಾಗಿ ಹಣ ಬಂದಿರುವ ಆರೋಪ ಬಂದಿರುವ ಹಿನ್ನೆಲೆಯಲ್ಲಿ ಇಡಿ ಅಧಿಕಾರಿಗಳು, ಕಳೆದ 5 ವರ್ಷಗಳ ಟ್ರಾನ್ಸ್​ಕ್ಷನ್ ನೀಡುವಂತೆ ಕೆಲ ಬ್ಯಾಂಕ್‌ಗಳಿಗೆ ಪತ್ರ ಬರೆದಿದೆ. ವಿದೇಶದಿಂದ ಹಣ ಬಂದಿರುವ ಕುರಿತು ಮಾಹಿತಿ ಹಾಗೂ ಅದಕ್ಕೆ ಸಂಬಂಧಿಸಿದ ಪ್ರತಿಗಳು, ವಿದೇಶದಿಂದ ಹಣ ಬಂದರೆ ಅದಕ್ಕೆ ಕಾರಣವೇನು ಎಂಬುದನ್ನು ತಿಳಿಸುವಂತೆ ಬ್ಯಾಂಕ್​ ಗಳಿಗೆ ಇಡಿ ಅಧಿಕಾರಿಗಳು ಪತ್ರದ ಮೂಲಕ ಮನವಿ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಈಗಾಗಲೇ ಈ ಕುರಿತಂತೆ ಉಡುಪಿ ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಕೇಂದ್ರ ಗೃಹ ಸಚಿವರಿಗೆ ಪತ್ರ ಬರೆದಿದ್ದರು.

Leave a Comment

Your email address will not be published. Required fields are marked *