ಬಾನು ಮುಷ್ತಾಕ್ ರಿಂದ ದಸರಾ ಉದ್ಘಾಟನೆ ವಿರುದ್ಧ ಕೋರ್ಟ್ ಮೆಟ್ಟಿಲೇರಿದ ಪ್ರತಾಪ್ ಸಿಂಹ

ಸಮಗ್ರ ನ್ಯೂಸ್: ಬೂಕರ್‌ ಪ್ರಶಸ್ತಿ ಪುರಸ್ಕೃತ ಸಾಹಿತಿ ಬಾನು ಮುಷ್ತಾಕ್‌ ಬಗ್ಗೆ ವಿರೋಧ ಕೇಳಿಬಂದಿದರೂ ಸರ್ಕಾರ ತನ್ನ ನಿರ್ಧಾರದಿಂದ ಹಿಂದೆ ಸರಿಯದೇ ಇತ್ತೀಚೆಗೆ ಹಾಸನದ ಅಮೀರ್ ಮೊಹಲ್ಲಾದಲ್ಲಿನ ಅವರ ನಿವಾಸಕ್ಕೆ ತೆರಳಿ, ಸರ್ಕಾರದ ಪರ ಜಿಲ್ಲಾಡಳಿತ ಮೈಸೂರು ದಸರಾ ಉದ್ಘಾಟನಾ ಕಾರ್ಯಕ್ರಮಕ್ಕೆ ಅಧಿಕೃತ ಆಹ್ವಾನ ನೀಡಿತ್ತು.

Ad Widget ... ..

ಈ ವಿಚಾರವಾಗಿ ಮಾಜಿ ಸಂಸದ ಪ್ರತಾಪ್​ ಸಿಂಹ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಸರ್ಕಾರದ ಕ್ರಮಕ್ಕೆ ತಡೆ ನೀಡುವಂತೆ ಕೋರಿ ಅರ್ಜಿ ಸಲ್ಲಿಸಿದ್ದಾರೆ. ರಾಜ್ಯ ಸರ್ಕಾರ ಮೈಸೂರು ದಸರಾ ಉದ್ಘಾಟಕರಾಗಿ ಸಾಹಿತಿ ಬಾನು ಮುಷ್ತಾಕ್​​ರನ್ನು ಘೋಷಿಸಿದಾಗಿನಿಂದಲೂ ಮಾಜಿ ಸಂಸದ ಪ್ರತಾಪ್​ ಸಿಂಹ ವಿರೋಧ ವ್ಯಕ್ತಪಡಿಸಿದ್ದರು. ಅವರ ವಿರುದ್ಧ ಕಿಡಿಕಾರಿದ್ದರು. ಇದೀಗ ಹೈಕೋರ್ಟ್ ಮೊರೆ ಹೋಗಿದ್ದಾರೆ.

Ad Widget

ಸರ್ಕಾರದ ಕ್ರಮಕ್ಕೆ ತಡೆ ನೀಡುವಂತೆ ಕೋರಿ ಪ್ರತಾಪ್ ಸಿಂಹ ಅರ್ಜಿ ಸಲ್ಲಿಸಿದ್ದು, ದಸರಾ ಉದ್ಘಾಟನೆ ವೇಳೆ ಚಾಮುಂಡೇಶ್ವರಿ ಪ್ರತಿಮೆಗೆ ಪುಷ್ಪಾರ್ಚನೆ ಮಾಡಬೇಕು. ವೇದ ಮಂತ್ರ, ಧಾರ್ಮಿಕ ಆಚರಣೆಗಳೊಂದಿಗೆ ಉದ್ಘಾಟನೆಯ ಸಂಪ್ರದಾಯವಿದೆ. ‘ಬಾನು ಮುಷ್ತಾಕ್ ಹಿಂದೂ ವಿರೋಧಿ,‌ ಕನ್ನಡ ವಿರೋಧಿ ಭಾವನೆ ಹೊಂದಿದ್ದಾರೆ’. ರಾಜ್ಯ ಸರ್ಕಾರ ಏಕಪಕ್ಷೀಯವಾಗಿ ಅವರನ್ನು ಆಯ್ಕೆ ಮಾಡಿದೆ ಎಂದಿದ್ದಾರೆ.

ಮೈಸೂರಿನ ರಾಜಮನೆತನದವರೂ ಸರ್ಕಾರದ ನಡೆ ವಿರೋಧಿಸಿದ್ದಾರೆ. ಸರ್ಕಾರದ ನಿರ್ಧಾರದಿಂದ ಹಿಂದೂಗಳ ಭಾವನೆಗೆ ಘಾಸಿ ಉಂಟಾಗಿದೆ. ಹೀಗಾಗಿ ಬಾನು ಮುಷ್ತಾಕ್​ರಿಗೆ ನೀಡಿದ ಆಹ್ವಾನ ಹಿಂಪಡೆಯುವಂತೆ ನಿರ್ದೇಶಿಸಲು ಮಾಜಿ ಸಂಸದ ಪ್ರತಾಪ್ ಸಿಂಹ ಮನವಿ ಮಾಡಿದ್ದಾರೆ.

Leave a Comment

Your email address will not be published. Required fields are marked *