ಸಮಗ್ರ ನ್ಯೂಸ್: ಬಿಹಾರದ ರಾಜ್‌ಗಿರ್‌ನಲ್ಲಿ ನಡೆದ 2025 ರ ಹಾಕಿ ಏಷ್ಯಾಕಪ್ ಫೈನಲ್ನಲ್ಲಿ ಹರ್ಮನ್ಪ್ರೀತ್ ಸಿಂಗ್ ನಾಯಕತ್ವದ ಭಾರತ ಹಾಕಿ ತಂಡವು, ದಕ್ಷಿಣ ಕೊರಿಯಾ ತಂಡವನ್ನು 4-1 ಗೋಲುಗಳಿಂದ ಸೋಲಿಸಿ ಪ್ರಶಸ್ತಿ ಗೆದ್ದುಕೊಂಡಿದೆ.
ಈ ಟೂರ್ನಿಯಲ್ಲಿ ಅಜೇಯ ತಂಡವಾಗಿ ಫೈನಲ್ ಪ್ರವೇಶಿಸಿದ್ದ ಭಾರತ ತಂಡ ನಾಲ್ಕನೇ ಬಾರಿಗೆ ಏಷ್ಯಾಕಪ್ ಗೆದ್ದ ಸಾಧನೆ ಮಾಡಿದೆ . ವಾಸ್ತವವಾಗಿ ಸೂಪರ್ 4 ಸುತ್ತಿನಲ್ಲಿ ಇದೇ ದಕ್ಷಿಣ ಕೊರಿಯಾ ವಿರುದ್ಧದ ಪಂದ್ಯವನ್ನು 2-2 ರಿಂದ ಡ್ರಾ ಮಾಡಿಕೊಂಡಿದ್ದ ಭಾರತ ಹಾಕಿ ತಂಡ ಫೈನಲ್ ಪಂದ್ಯದಲ್ಲಿ ದಕ್ಷಿಣ ಕೊರಿಯಾಕ್ಕೆ ಯಾವುದೇ ಅವಕಾಶ ನೀಡದೆ ಏಕಪಕ್ಷೀಯವಾಗಿ ಪಂದ್ಯವನ್ನು ಗೆದ್ದುಕೊಂಡಿತು .ಈ ಗೆಲುವಿನೊಂದಿಗೆ ಟೀಂ ಇಂಡಿಯಾ ನೆದರ್ಲ್ಯಾಂಡ್ಸ್ ಮತ್ತು ಬೆಲ್ಜಿಯಂನಲ್ಲಿ ನಡೆಯಲಿರುವ 2026 ರ FIH ಪುರುಷರ ವಿಶ್ವಕಪ್ಗೆ ಅರ್ಹತೆ ಪಡೆದುಕೊಂಡಿದೆ .
ಪಂದ್ಯದ ಆರಂಭದಿಂದಲೇ ಭಾರತ ತಂಡ ಮೇಲುಗೈ ಸಾಧಿಸಿತು. ಪಂದ್ಯ ಆರಂಭವಾದ 30ನೇ ಸೆಕೆಂಡ್ನಲ್ಲಿ ಸುಖ್ಜಿತ್ ಸಿಂಗ್ ಮೊದಲ ಗೋಲು ಗಳಿಸಿದರು. ಅಂತಿಮವಾಗಿ ಮೊದಲ ಕ್ವಾರ್ಟರ್ 1-0 ಅಂತರದಿಂದ ಮುಕ್ತಾಯವಾಯಿತು. ಎರಡನೇ ಕ್ವಾರ್ಟರ್ನಲ್ಲಿ ಭಾರತ ಮತ್ತೊಂದು ಗೋಲು ದಾಖಲಿಸಿತು. ತಂಡದ ಪರ ದಿಲ್ಪ್ರೀತ್ ಸಿಂಗ್ 27ನೇ ನಿಮಿಷದಲ್ಲಿ ಈ ಗೋಲು ಬಾರಿಸಿದರು. ಇದರೊಂದಿಗೆ, ಟೀಂ ಇಂಡಿಯಾ 2-0 ಮುನ್ನಡೆ ಸಾಧಿಸಿತು.
ದ್ಯದಲ್ಲಿ ಭಾರತ ತಂಡ ಪ್ರಾಬಲ್ಯ ಮೆರೆಯುತ್ತಲೇ ಇತ್ತು ಆದರೆ ಕೊರಿಯಾದ ರಕ್ಷಣಾ ಪಡೆಗಳನ್ನು ಭೇದಿಸುವುದು ಅಷ್ಟು ಸುಲಭವಾಗಿರಲಿಲ್ಲ. ಈ ಕಾರಣದಿಂದಾಗಿ ಮೂರನೇ ಗೋಲು ಬರಲು ಸಾಕಷ್ಟು ಸಮಯ ಹಿಡಿಯಿತು. ಆದರೆ 45 ನೇ ನಿಮಿಷದಲ್ಲಿ ದಿಲ್‌ಪ್ರೀತ್ ಸಿಂಗ್ ವೈಯಕ್ತಿಕವಾಗಿ ಎರಡನೇ ಗೋಲು ಬಾರಿಸಿ ಅಂತರವನ್ನು 3-0 ಗೇರಿಸಿದರು. ಆದರೆ ದಕ್ಷಿಣ ಕೊರಿಯಾ ಪಂದ್ಯದ 57 ನೇ ನಿಮಿಷದಲ್ಲಿ ಗೋಲು ಗಳಿಸಿ ಅಂತರವನ್ನು ಕೊಂಚ ತಗ್ಗಿಸುವ ಕೆಲಸ ಮಾಡಿತು.







