ಗಣಪತಿ ವಿಸರ್ಜನೆ ವೇಳೆ ಕಲ್ಲುತೂರಾಟ| ಉದ್ವಿಗ್ನಗೊಂಡ ಮಂಡ್ಯ ಜಿಲ್ಲೆಯ ಮದ್ದೂರು| ನಾಳೆ ಬಂದ್ ಗೆ ಕರೆ

ಸಮಗ್ರ ನ್ಯೂಸ್: ಮದ್ದೂರಿನಲ್ಲಿ ನಡೆದ ಕಲ್ಲು ತೂರಾಟ ಪ್ರಕರಣ ಖಂಡಿಸಿ ಹಿಂದೂಪರ ಸಂಘಟನೆಗಳಿಂದ ನಾಳೆ ಮದ್ದೂರು ಬಂದ್ ಗೆ ಕರೆ ನೀಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

Ad Widget ... ..

ಮದ್ದೂರಿನಲ್ಲಿ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ 21 ಮಂದಿಯನ್ನ ಬಂಧಿಸಲಾಗಿದೆ. ಮದ್ದೂರಿನಲ್ಲಿ ಪರಿಸ್ಥಿತಿ ಉದ್ವಿಗ್ನವಾಗಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಉಸ್ತುವಾರಿ ಸಚಿವ ಚೆಲುವರಾಯಸ್ವಾಮಿ ಸಿಎಂ ಸೂಚನೆ ಮೇರೆಗೆ ಮದ್ದೂರಿಗೆ ಹೋಗುತ್ತಿದ್ದಾರೆ.

Ad Widget

ತಪ್ಪಿತಸ್ಥರು ಯಾರೇ ಆಗಿರಲಿ ಕಾನೂನು ಕ್ರಮ ಕೈಗೊಳ್ಳುವುದಾಗಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.ಮದ್ದೂರಿನಲ್ಲಿ ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಗಲಾಟೆಯಾಗಿದೆ. ಮಸೀದಿ ಬಳಿ ಮೆರವಣಿಗೆ ಸಾಗುವಾಗ ಕಲ್ಲುತೂರಾಟ ಪ್ರಕರಣ ನಡೆದಿದೆ.

ಕೆಲವರು ಗುಂಪು ಕಟ್ಟಿಕೊಂಡು ಗಲಾಟೆಗೆ ಯತ್ನಿಸಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರು ಲಾಠಿಚಾರ್ಜ್ ಮಾಡಿದ್ದಾರೆ ಎಂದು ಹೇಳಿದರು. ಮದ್ದೂರುನಲ್ಲಿ ನಡೆದ ಕಲ್ಲು ತೂರಾಟ ಪ್ರಕರಣ ಸಂಬಂಧ ಈಗಾಗಲೇ 21 ಆರೋಪಿಗಳನ್ನು ಬಂಧಿಸಲಾಗಿದೆ. ತಪ್ಪಿತಸ್ಥರು ಯಾರೇ ಆಗಿರಲಿ, ಹಿಂದೂ ಆಗಿರಲಿ, ಮುಸ್ಲಿಂ ಆಗಿರಲಿ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು.

Leave a Comment

Your email address will not be published. Required fields are marked *