ಹಾಸನ: ಗಣೇಶ ಮೆರವಣಿಗೆಯಲ್ಲಿ ಅವಘಡ| ಸಾವಿನ ಸಂಖ್ಯೆ 9ಕ್ಕೆ ಏರಿಕೆ| ಮೃತರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಣೆ

ಸಮಗ್ರ ನ್ಯೂಸ್: ಹಾಸನ ತಾಲೂಕಿನ ಮೊಸಳೆಹೊಸಹಳ್ಳಿ ಗ್ರಾಮದಲ್ಲಿ ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆಯ ಮೇಲೆ
ಟ್ರಕ್ ಹರಿದು ಸಂಭವಿಸಿದ ಭೀಕರ ದುರಂತದಲ್ಲಿ 9 ಮಂದಿ ಸಾವನ್ನಪ್ಪಿದ್ಧಾರೆ. ಮೃತರ ಕುಟುಂಬಕ್ಕೆ ತಲಾ ಐದು ಲಕ್ಷ ಪರಿಹಾರವನ್ನು ‌ಘೋಷಿಸಲಾಗಿದೆ.

Ad Widget ... ..

ಅಪಘಾತದಲ್ಲಿ 9 ಜನ ಸಾವನ್ನಪ್ಪಿದ್ದಾರೆ. ಟ್ರಕ್ ಹರಿದು ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು, ಗಂಭೀರವಾಗಿ ಗಾಯಗೊಂಡಿದ್ದ 5 ಜನ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಅಪಘಾತದಲ್ಲಿ 9 ಜನ ಸಾವನ್ನಪ್ಪಿದ್ದಾರೆ. ಟ್ರಕ್ ಹರಿದು ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು, ಗಂಭೀರವಾಗಿ ಗಾಯಗೊಂಡಿದ್ದ 5 ಜನ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

Ad Widget

ಗಣೇಶ ಮೆರವಣಿಗೆ ಸಾಗುತ್ತಿದ್ದ ವೇಳೆಯಲ್ಲಿ ರಸ್ತೆಯ ಒಂದು ಬದಿಯಿಂದ ಏಕಾಏಕಿ ಡಿವೈಡರ್ ದಾಟಿಕೊಂಡು ಟ್ರಕ್ ನುಗ್ಗಿದೆ. ಮೆರವಣಿಗೆಯಲ್ಲಿ ಸಾಗುತ್ತಿದ್ದವರ ಮೇಲೆ ಟ್ರಕ್ ಹರಿದಿದ್ದು, ಟ್ರಕ್ ನಡಿ ಸಿಲುಕಿದ ನಾಲ್ವರು ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ. ಆಸ್ಪತ್ರೆಯಲ್ಲಿ 5 ಜನ ಮೃತಪಟ್ಟಿದ್ದಾರೆ.

ಮೃತರ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಲಾಗಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಪರಿಹಾರ ಘೋಷಣೆ ಮಾಡಿದ್ದಾರೆ. ಹಾಸನದಲ್ಲಿ ಗಣೇಶ ವಿಸರ್ಜನೆಗಾಗಿ ಮೆರವಣಿಗೆಯಲ್ಲಿ ತೆರಳುತ್ತಿದ್ದವರ ಮೇಲೆ ಲಾರಿ ಹರಿದು ಹಲವರು ಸಾವಿಗೀಡಾಗಿ, ಸುಮಾರು 20ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡ ಸುದ್ದಿ ತಿಳಿದು ಅತೀವ ದುಃಖವಾಯಿತು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಗಾಯಾಳುಗಳು ಆದಷ್ಟು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ.

ಮೃತರ ಕುಟುಂಬಗಳಿಗೆ ಸರ್ಕಾರದ ವತಿಯಿಂದ ತಲಾ ರೂ.5 ಲಕ್ಷ ಪರಿಹಾರ ನೀಡಲಾಗುವುದು. ಘಟನೆಯಲ್ಲಿ ಗಾಯಗೊಂಡವರ ಚಿಕಿತ್ಸೆಯ ವೆಚ್ಚವನ್ನು ಸರ್ಕಾರವೇ ಭರಿಸಲಿದೆ. ಇದು ಅತ್ಯಂತ ನೋವಿನ ಘಳಿಗೆ. ಅಪಘಾತ ಸಂತ್ರಸ್ತ ಕುಟುಂಬಗಳ ಜೊತೆ ನಾವೆಲ್ಲರೂ ನಿಲ್ಲೋಣ ಎಂದು ಸಿಎಂ ತಿಳಿಸಿದ್ದಾರೆ.

ಮೃತರ ವಿವರ ಇಂತಿದೆ:
ಪ್ರವೀಣ್ ಕುಮಾರ್, ಅಂತಿಮ ಬಿಇ ವಿದ್ಯಾರ್ಥಿ, ಬಳ್ಳಾರಿ, ರಾಜೇಶ (17) ಕೆ.ಬಿ.ಪಾಳ್ಯ, ಹಳೆಕೋಟೆ ಹೋಬಳಿ, ಹೊಳೆನರಸೀಪುರ ತಾಲ್ಲೂಕು, ಈಶ್ವರ (17) ಡನಾಯಕನಹಳ್ಳಿ ಕೊಪ್ಪಲು, ಹೊಳೆನರಸೀಪುರ ತಾಲ್ಲೂಕು , ಗೋಕುಲ (17) ಮುತ್ತಿಗೆಹೀರಳ್ಳಿ ಗ್ರಾಮ, ಹೊಳೆನರಸೀಪುರ ತಾಲ್ಲೂಕು, ಕುಮಾರ (25 ) ಕಬ್ಬಿನಹಳ್ಳಿ ಗ್ರಾಮ, ಹಳೇಕೋಟೆ ಹೋಬಳಿ, ಹೊಳೆನರಸೀಪುರ ತಾಲ್ಲೂಕು, ಪ್ರವೀಣ (25) ಕಬ್ಬಿನಹಳ್ಳಿ ಗ್ರಾಮ ಹಳೇಕೋಟೆ ಹೋಬಳಿ, ಹೊಳೆನರಸೀಪುರ ತಾಲ್ಲೂಕು.‌ ಮಿಥುನ್ (23) ಗವಿಗಂಗಾಪುರ ಗ್ರಾಮ, ಹೊಸದುರ್ಗ ತಾಲೂಕು ಚಿತ್ರದುರ್ಗ ಜಿಲ್ಲೆ, ಸುರೇಶ ಬಿಇ ವಿದ್ಯಾರ್ಥಿ ಮಣೆನಹಳ್ಳಿ ಮರ್ಲೆ ಗ್ರಾಮ, ಚಿಕ್ಕಮಗಳೂರು ಜಿಲ್ಲೆ, ಪ್ರಭಾಕರ್ (55) ಬಂಟರಹಳ್ಳಿ, ಹಾಸನ ತಾಲ್ಲೂಕು.

Leave a Comment

Your email address will not be published. Required fields are marked *