ಏಷ್ಯಾಕಪ್ ಕ್ರಿಕೆಟ್| ಪಾಕಿಸ್ತಾನವನ್ನು ಮತ್ತೊಮ್ಮೆ ಬಗ್ಗುಬಡಿದ ಟೀಂ ಇಂಡಿಯಾ

ಸಮಗ್ರ ನ್ಯೂಸ್: ದುಬೈ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಟಿ20 ಏಷ್ಯಾಕಪ್ ಟೂರ್ನಿಯಲ್ಲಿ ಪಾಕಿಸ್ತಾನ ವಿರುದ್ಧ ಭಾರತ ಮತ್ತೆ ಭರ್ಜರಿ ಜಯ ಗಳಿಸಿದೆ. ಗುಂಪು ಹಂತದ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಜಯಗಳಿಸಿದ್ದ ಟೀಂ ಇಂಡಿಯಾ ಭಾನುವಾರ ನಡೆದ ಸೂಪರ್ -4 ಪಂದ್ಯದಲ್ಲಿ ಕೂಡ 6 ವಿಕೆಟ್ ಗಳ ಭರ್ಜರಿ ಜಯ ಗಳಿಸಿದೆ.

Ad Widget ... ..

ಟಾಸ್ ವೇಳೆ ನಿರೀಕ್ಷೆಯಂತೆ ಪಾಕಿಸ್ತಾನ ನಾಯಕನ ಜೊತೆಗೆ ಹ್ಯಾಂಡ್ ಶೇಕ್ ಮಾಡಿದ ಸೂರ್ಯ ಕುಮಾರ್ ಮೊದಲು ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡರು. ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ 20 ಓವರ್ ಗಳಲ್ಲಿ 5 ವಿಕೆಟ್ ಕಳೆದುಕೊಂಡು 171 ರನ್ ಗಳಿಸಿತು. ಫರಾನ್ 58 ರನ್ ಗಳಿಸಿದರು. ಭಾರತ 18.5 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 174 ರನ್ ಗಳಿಸಿತು. ಅಭಿಷೇಕ್ ಶರ್ಮಾ 74, ಗಿಲ್ 47, ತಿಲಕ್ ಅಜೇಯ 30 ರನ್ ಗಳಿಸಿದರು.

Ad Widget

Leave a Comment

Your email address will not be published. Required fields are marked *