ವಿಶ್ವವಿಖ್ಯಾತ ‘ಮೈಸೂರು ದಸರಾ’ಗೆ ಚಾಲನೆ ನೀಡಿದ ಸಾಹಿತಿ ಬಾನುಮುಷ್ತಾಕ್|

ಸಮಗ್ರ ನ್ಯೂಸ್: ನಾಡದೇವತೆ ಚಾಮುಂಡೇಶ್ವರಿ ದೇವಿಗೆ ಪುಷ್ಟಾರ್ಚನೆ ಮಾಡುವ ಮೂಲಕ ವೃಶ್ಚಿಕ ಲಗ್ನದಲ್ಲಿ ಬುಕರ್ ಪ್ರಶಸ್ತಿ ಪುರಸ್ಕೃತ ಸಾಹಿತಿ ಬಾನು ಮುಸ್ತಾಕ್ ಉತ್ಸವಕ್ಕೆ ಚಾಲನೆ ನೀಡಿದ್ದಾರೆ.

Ad Widget ... ..

ಬಳಿಕ ಚಾಮುಂಡೇಶ್ವರಿ ವಿಗ್ರಹಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಮೈಸೂರು ದಸರಾ ಉದ್ಘಾಟಿಸಿದ್ದಾರೆ. ವೃಶ್ಚಿಕ ಲಗ್ನದಲ್ಲಿ ಚಾಮುಂಡಿ ಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಿ ಸನ್ನಿಧಿಯಲ್ಲಿ ಬಾನು ಮುಷ್ತಾಕ್ ಅವರು ಈ ಬಾರಿ ದಸರಾ ಮಹೋತ್ಸವಕ್ಕೆ ಚಾಲನೆ ನೀಡಿದ್ದಾರೆ.

Ad Widget

ಈ ಬಾರಿಯ ದಸರಾಗೆ ಅರಮನೆ ನಗರಿ ಮೈಸೂರು ನವವಧುವಿನಂತೆ ಸಿಂಗಾರಗೊಂಡು ನಿಂತಿದೆ. ವಿದ್ಯುತ್ ದೀಪಗಳಿಂದ ಅಲಂಕೃತಗೊಂಡ ಬೀದಿಗಳು, ಕಲೆ, ಸಾಹಿತ್ಯ, ಸಂಸ್ಕೃತಿಗಳನ್ನು ನೋಡುಗರಿಗೆ ಉಣಬಡಿಸಲು ಎದುರುನೋಡುತ್ತಿರುವ ವೇದಿಕೆಗಳು, ತಳಿರು ತೋರಣಗಳಿಂದ ಸಿಂಗಾರಗೊಂಡ ಮೈಸೂರು ಅರಮನೆ ಹೀಗೆ ಇಡೀ ನಗರವೇ ಹೊಸರೂಪ ಪಡೆದು ಕಂಗೊಳಿಸುತ್ತಿದೆ.

ಮೈಸೂರು ದಸರಾದ ಆಕರ್ಷಣೆಯ ಕೇಂದ್ರ ಬಿಂದುವಾದ ಅಂಬಾರಿ ಮೆರವಣಿಗೆಗೆ ಈಗಾಗಲೇ ಭರ್ಜರಿ ತಯಾರಿ ನಡೆದಿದೆ. ತಿಂಗಳ ಹಿಂದೆಯೇ ಅರಮನೆ ಆವರಣದಲ್ಲಿ ಬೀಡುಬಿಟ್ಟಿದ್ದ ಗಜಪಡೆ ನಿತ್ಯದ ತಾಲೀಮ ಮುಗಿಸಿ, ತಾಯಿ ಚಾಮುಂಡೇಶ್ವರಿಯ ಉತ್ಸವ ಮೂರ್ತಿ ಹೊತ್ತು ಸಾಗಲು ಸರ್ವಸನ್ನದ್ಧಗೊಂಡಿದೆ. ಕರುನಾಡಿನ ಮನೆಮಕ್ಕಳಾಗಿರುವ ಅಭಿಮನ್ಯು – ಭೀಮನ ಜೋಡಿ ಈ ಬಾರಿಯ ಮೈಸೂರು ದಸರಾದ ಮೆರುಗು ಹೆಚ್ಚಿಸುವುದರಲ್ಲಿ ಅನುಮಾನವೇ ಇಲ್ಲ.

Leave a Comment

Your email address will not be published. Required fields are marked *