ದೈಹಿಕ ಶಿಕ್ಷಕನ ಮೊಬೈಲ್ ಒಳಗೆ 2500ಕ್ಕೂ ಹೆಚ್ಚು ಅಶ್ಲೀಲ ವಿಡಿಯೋ? ರಾಜ್ಯದಲ್ಲಿ ಪ್ರಜ್ವಲ್ ರೇವಣ್ಣ ಮೀರಿಸುವ ಮತ್ತೊಂದು ಲೈಂಗಿಕ ಹಗರಣ ಆರೋಪ

ಸಮಗ್ರ ನ್ಯೂಸ್: ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣವನ್ನೂ ಮೀರಿಸುವ ಲೈಂಗಿಕ ಹಗರಣವೊಂದು ಬೆಂಗಳೂರಿನಲ್ಲಿ ನಡೆದಿದೆ ಎಂದು ಹೇಳಲಾಗಿದ್ದು, ಶಾಲಾ ಸಿಬ್ಬಂದಿಯೊಬ್ಬರ ಬಳಿ 2500ಕ್ಕೂ ಅಧಿಕ ಅಶ್ಲೀಲ ವಿಡಿಯೋಗಳಿವೆ ಎಂದು ಮಹಿಳೆಯೊಬ್ಬರು ಆರೋಪಿಸಿದ್ದಾರೆ.

Ad Widget ... ..

ಕ್ರಿಕೆಟ್ ಕೋಚ್ ಮತ್ತು ಶಾಲಾ ದೈಹಿಕ ಶಿಕ್ಷಕನ ಬಳಿ ಬೇರೆ ಬೇರೆ ಮಹಿಳೆಯರ ಅಶ್ಲೀಲ ವಿಡಿಯೋಗಳು ಇವೆ ಎಂದು ಮಹಿಳೆಯೊಬ್ಬರು ಗಂಭೀರ ಆರೋಪ ಮಾಡಿದ್ದಾರೆ.

Ad Widget

ಬೆಂಗಳೂರಿನಲ್ಲಿ ಖಾಸಗಿ ಶಾಲೆಯೊಂದರ ದೈಹಿಕ ಶಿಕ್ಷಕನಾಗಿರುವ ಮ್ಯಾಥ್ಯೂ ಎಂಬಾತನ ವಿರುದ್ಧ ಮಹಿಳೆ ಆರೋಪಿಸಿದ್ದು, ಕೆಲವು ಮಹಿಳೆಯರು ಮತ್ತು ಯುವತಿಯರ ಜೊತೆಗಿರುವ ಖಾಸಗಿ ಕ್ಷಣವನ್ನು ಮ್ಯಾಥ್ಯೂ ಸೆರೆ ಹಿಡಿದುಕೊಂಡಿದ್ದಾನೆ. ಆತನ ಬಳಿ ಸುಮಾರು 2500 ವಿಡಿಯೋಗಳಿವೆ ಎಂದು ಸಂತ್ರಸ್ತೆ ಗಂಭೀರ ಆರೋಪ ಮಾಡಿದ್ದಾರೆ.

ಈ ಸಂಬಂಧ ಮ್ಯಾಥ್ಯೂ ವಿರುದ್ಧ ಸಂತ್ರಸ್ಥ ಮಹಿಳೆ ಮಹಿಳಾ ಆಯೋಗದ ಮೆಟ್ಟಿಲೇರಿದ್ದು, ದೂರು ನೀಡಿದ್ದಾರೆ ಎನ್ನಲಾಗಿದೆ. ದೂರಿನಲ್ಲಿ ತನ್ನನ್ನು ದೈಹಿಕವಾಗಿ ದುರ್ಬಳಕೆ ಮಾಡಿಕೊಂಡು, ಖಾಸಗಿ ಕ್ಷಣಗಳನ್ನು ವಿಡಿಯೋ ರೆಕಾರ್ಡ್ ಮಾಡಿದ್ದಾನೆ ಎಂದು ಮಹಿಳೆ ಆರೋಪಿಸಿದ್ದಾಳೆ. ಇದಲ್ಲದೇ, ಇತರ ಹಲವಾರು ಮಹಿಳೆಯರು ಮತ್ತು ಯುವತಿಯರ ಜೊತೆಗಿನ ಖಾಸಗಿ ಕ್ಷಣಗಳನ್ನು ಸಹ ಮ್ಯಾಥ್ಯೂ ಸೆರೆಹಿಡಿದುಕೊಂಡಿದ್ದು, ಒಟ್ಟು 2500 ವಿಡಿಯೋಗಳು ಆತನ ಬಳಿಯಿವೆ ಎಂದು ಆರೋಪಿಸಿದ್ದಾರೆ.

ಸಂತ್ರಸ್ತೆಗೆ ಈಗಾಗಲೇ ಮದುವೆಯಾಗಿದ್ದು, ಒಂದು ಹೆಣ್ಣು ಮಗುವಿದೆ. ತನ್ನ ಪತಿಯಿಂದ ಕಾನೂನಾತ್ಮಕವಾಗಿ ವಿಚ್ಛೇದನ ಪಡೆದಿರುವ ಈ ಮಹಿಳೆ, ತನ್ನ ಮಗಳು ಓದುತ್ತಿದ್ದ ಖಾಸಗಿ ಶಾಲೆಯಲ್ಲಿ ಮ್ಯಾಥ್ಯೂ ಪರಿಚಯವಾಗಿದೆ.

ಮ್ಯಾಥ್ಯೂ ಆ ಶಾಲೆಯಲ್ಲಿ ಕ್ರಿಕೆಟ್ ಕೋಚ್ ಮತ್ತು ದೈಹಿಕ ಶಿಕ್ಷಕನಾಗಿ ಕೆಲಸ ಮಾಡುತ್ತಿದ್ದ. ಇಬ್ಬರ ನಡುವೆ ಪರಿಚಯ ಬೆಳೆದು, ಬಳಿಕ ಜೊತೆಯಾಗಿ ವಾಸಿಸಿದ್ದಾರೆ. ಸಂತ್ರಸ್ತೆಯ ಹೇಳಿಕೆಯಂತೆ ಇಬ್ಬರು ಚರ್ಚ್‌ನಲ್ಲಿ ಮದುವೆಯಾಗಿದ್ದಾರೆ. ಬಳಿಕ ದೈಹಿಕ ಸಂಪರ್ಕದ ಕ್ಷಣಗಳನ್ನು ಮ್ಯಾಥ್ಯೂ ರಹಸ್ಯವಾಗಿ ರೆಕಾರ್ಡ್ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಮದುವೆಯಾದ ನಂತರ ಮ್ಯಾಥ್ಯೂ ನ ನಿಜವಾದ ಸ್ವರೂಪ ತಿಳಿಯಿತು ಎಂದು ಸಂತ್ರಸ್ತೆ ಹೇಳಿದ್ದಾಳೆ.

ನಾವು ಕೆಲ ವರ್ಷಗಳ ಕಾಲ ಜೊತೆಯಾಗಿದ್ದೆವು. ಆದರೆ, ಒಂದು ರಾತ್ರಿ ನಾನು ಮಲಗಿದ್ದಾಗ ನನ್ನ ಮೊಬೈಲ್ ಸಮೇತ ಆತ ಓಡಿಹೋದ. ಆ ಮೊಬೈಲ್‌ನಲ್ಲಿ ಈತನ ಕೃತ್ಯಕ್ಕೆ ಸಂಬಂಧಿಸಿದ ಹೆಚ್ಚಿನ ಸಾಕ್ಷಿಗಳಿದ್ದವು ಎಂದು ಸಂತ್ರಸ್ತೆ ಹೇಳಿದ್ದಾಳೆ.

ಇನ್ನು ಈ ಸಂಬಂಧ ಕೋಣನಕುಂಟೆ ಪೊಲೀಸ್ ಠಾಣೆಗೆ ದೂರು ನೀಡಲು ಹೋದರೆ ತೆಗೆದುಕೊಳ್ಳಲುತ್ತಿಲ್ಲ ಎಂದು ಸಂತ್ರಸ್ಥೆ ಅಳಲು ತೋಡಿಕೊಂಡಿದ್ದು, ಕೊನೆಗೆ ಮಹಿಳಾ ಆಯೋಗದ ಮೊರೆ ಹೋಗಿದ್ದಾರೆ ಎನ್ನಲಾಗಿದೆ.

Leave a Comment

Your email address will not be published. Required fields are marked *