ಪಂಚಭೂತಗಳಲ್ಲಿ ಲೀನರಾದ ಎಸ್.ಎಲ್ ಬೈರಪ್ಪ| ಸರಸ್ವತಿ ಪುತ್ರ ಇನ್ನು ನೆನಪು ಮಾತ್ರ

ಸಮಗ್ರ ನ್ಯೂಸ್: ಪದ್ಮಶ್ರೀ, ಪದ್ಮವಿಭೂಷಣ ಪುರಸ್ಕೃತ ಕನ್ನಡದ ಖ್ಯಾತ ಹಿರಿಯ ಸಾಹಿತಿ ಎಸ್ ಎಲ್ ಭೈರಪ್ಪ ಅವರು, ಇಂದು ಪಂಚಭೂತಗಳಲ್ಲಿ ಲೀನವಾದರು. ಮೈಸೂರು ಬೆಟ್ಟದ ತಪ್ಪಲಿನಲ್ಲಿರುವ ಚಿರಶಾಂತಿಧಾಮದಲ್ಲಿ ಹೊಯ್ಸಳ ಕರ್ನಾಟಕ ಬ್ರಾಹ್ಮಣ ಸಂಪ್ರದಾಯದಂತೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅವರ ಅಂತ್ಯಕ್ರಿಯೆ ನೆರವೇರಿತು.

Ad Widget . Ad Widget . Ad Widget . Ad Widget . Ad Widget . Ad Widget .

ಇಬ್ಬರು ಪುತ್ರರಾದ ರವಿ ಶಂಕರ್ ಹಾಗು ಉದಯ್ ಶಂಕರ್ ಅಂತಿಮ ವಿಧಿ ವಿಧಾನದ ಬಳಿಕ ಅಂತ್ಯಕ್ರಿಯೆ ನೆರವೇರಿಸಿದರು. ಪುತ್ರಿ ಸಹನಾ ವಿಜಯಕುಮಾರ್, ಸಚಿವರಾದ ಡಾ.ಎಚ್ ಸಿ ಮಹದೇವಪ್ಪ. ವೆಂಕಟೇಶ್. ಪ್ರಹ್ಲಾದ್ ಜೋಶಿ ಸೇರಿದಂತೆ ಹಲವು ಗಣ್ಯರು ಪಾಲ್ಗೊಂಡಿದ್ದಾರೆ.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

ನಿನ್ನೆ ಎಸ್.ಎಲ್. ಭೈರಪ್ಪ ಅವರ ಪಾರ್ಥಿವ ಶರೀರವನ್ನು ಮೈಸೂರಿಗೆ ತರಲಾಗಿದ್ದು, ಮೈಸೂರಿನ ಕಲಾಮಂದಿರದ ಬಳಿಯ ಕಿಂದರಿ ಜೋಗಿ ಆವರಣದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ನಂತರ ಜೆಎಸ್‌ಎಸ್ ಆಸ್ಪತ್ರೆಗೆ ಪಾರ್ಥಿವ ಶರೀರ ರವಾನಿಸಲಾಗಿತ್ತು. ಇಂದು ಬೆಳಗ್ಗೆ 8:30 ಕ್ಕೆ ಭೈರಪ್ಪ ಅವರ ಮನೆಯಲ್ಲಿ ಅಂತಿಮ ವಿಧಿ ವಿಧಾನ ನಡೆಸಿ ಚಾಮುಂಡಿ ಬೆಟ್ಟದ ತಪ್ಪಲಿನ ರುದ್ರಭೂಮಿಯಲ್ಲಿ ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಯಿತು.

Leave a Comment

Your email address will not be published. Required fields are marked *