ಇಂದು ರಾಷ್ಟ್ರಪಿತ ಮಹಾತ್ಮ ಗಾಂಧಿಜಿಯವರ 156ನೇ ಜನ್ಮದಿನ| ಪ್ರಧಾನಿ ಮೋದಿ ಸಹಿತ ಹಲವರಿಂದ ಗಾಂಧಿ ಸಮಾಧಿಗೆ ಪುಷ್ಪನಮನ

ಸಮಗ್ರ ನ್ಯೂಸ್: ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 156ನೇ ಜನ್ಮದಿನದ ನಿಮಿತ್ತ ಪ್ರಧಾನಮಂತ್ರಿ ಮೋದಿ ಸೇರಿದಂತೆ ಹಲವು ಗಣ್ಯರು ರಾಜ್​ಘಾಟ್​ನಲ್ಲಿರುವ ಅವರ ಸಮಾಧಿಗೆ ಪುಷ್ಪನಮನ ಸಲ್ಲಿಸಿದ್ದಾರೆ.

Ad Widget ... ..

ಇದಕ್ಕೂ ಮುನ್ನ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದ ಮೋದಿಯವರು, ಗಾಂಧಿ ಜಯಂತಿಯು ಬಾಪು ಅವರ ಅಸಾಧಾರಣ ಜೀವನಕ್ಕೆ ಗೌರವ ಸಲ್ಲಿಸುವುದಾಗಿದೆ, ಅವರ ಆದರ್ಶಗಳು ಮಾನವ ಇತಿಹಾಸದ ಹಾದಿಯನ್ನು ಪರಿವರ್ತಿಸಿದವು.

Ad Widget

ಧೈರ್ಯ ಮತ್ತು ಸರಳತೆ ಹೇಗೆ ದೊಡ್ಡ ಬದಲಾವಣೆಯ ಸಾಧನಗಳಾಗಬಹುದು ಎಂಬುದನ್ನು ಅವರು ತೋರಿಸಿಕೊಟ್ಟರು ಮತ್ತೊಂದು ಪೋಸ್ಟ್ ನಲ್ಲಿ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ನೆನೆದು, ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನದಂದು ಗೌರವಪೂರ್ವಕ ನಮನಗಳನ್ನು ತಿಳಿಸಿದ್ದಾರೆ.

ಲಾಲ್ ಬಹದ್ದೂರ್ ಶಾಸ್ತ್ರಿ ಅವರು ಅಸಾಧಾರಣ ರಾಜಕಾರಣಿಯಾಗಿದ್ದು, ಅವರ ಸಮಗ್ರತೆ, ನಮ್ರತೆ ಮತ್ತು ದೃಢಸಂಕಲ್ಪವು ಸವಾಲಿನ ಸಮಯದಲ್ಲೂ ಭಾರತವನ್ನು ಬಲಪಡಿಸಿತು. ಲಾಲ್ ಬಹದ್ದೂರ್ ಶಾಸ್ತ್ರಿ ಅವರು ಪ್ರಭಾವಿ ನಾಯಕತ್ವ, ಶಕ್ತಿ ಮತ್ತು ನಿರ್ಣಾಯಕ ವ್ಯಕ್ತಿತ್ವವನ್ನು ಹೊಂದಿದ್ದರು. ‘ಜೈ ಜವಾನ್ ಜೈ ಕಿಸಾನ್’ ಎಂಬ ಅವರ ಸ್ಪಷ್ಟ ಕರೆ ನಮ್ಮ ಜನರಲ್ಲಿ ದೇಶಭಕ್ತಿಯ ಮನೋಭಾವವನ್ನು ಹುಟ್ಟುಹಾಕಿತು.

Leave a Comment

Your email address will not be published. Required fields are marked *