ರಾಜ್ಯಕ್ಕೆ ಕೇಂದ್ರದಿಂದ ದಸರಾ ಗಿಪ್ಟ್| 3705 ಕೋಟಿ ತೆರಿಗೆ ಹಂಚಿಕೆ

ಸಮಗ್ರ ನ್ಯೂಸ್: ಕೇಂದ್ರ ಸರ್ಕಾರವು ರಾಜ್ಯಗಳಿಗೆ ಹೆಚ್ಚುವರಿ 1,01,603 ಕೋಟಿ ರೂ. ತೆರಿಗೆ ಪಾಲನ್ನು ಗುರುವಾರ ಬಿಡುಗಡೆ ಮಾಡಿದ್ದು, ಇದರಲ್ಲಿ ಕರ್ನಾಟಕಕ್ಕೆ 3,705 ಕೋಟಿ ರೂ ಹಂಚಿಕೆ ಮಾಡಲಾಗಿದೆ.

Ad Widget ... ..

ರಾಜ್ಯಗಳ ಅಭಿವೃದ್ಧಿ/ಕಲ್ಯಾಣ ಸಂಬಂಧಿತ ವೆಚ್ಚಗಳಿಗೆ ಹಣಕಾಸು ಒದಗಿಸಲು ಮತ್ತು ಬಂಡವಾಳ ವೆಚ್ಚ ವೇಗಗೊಳಿಸಲು ಹಾಗೂ ಮುಂಬರುವ ಹಬ್ಬಗಳ ಋತುವಿನ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಅಕ್ಟೋಬರ್ 1 ರಂದು ರಾಜ್ಯ ಸರ್ಕಾರಗಳಿಗೆ ಹೆಚ್ಚುವರಿ 1,01,603 ಕೋಟಿ ರೂ ತೆರಿಗೆ ಹಂಚಿಕೆಯನ್ನು ಬಿಡುಗಡೆ ಮಾಡಿದೆ ಎಂದು ಕೇಂದ್ರ ಹಣಕಾಸು ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.

Ad Widget

ಅಕ್ಟೋಬರ್ 10ರಂದು ಬಿಡುಗಡೆಯಾಗಬೇಕಿದ್ದ ಸಾಮಾನ್ಯ ಮಾಸಿಕ 81,735 ಕೋಟಿ ರೂ.ಗಳ ತೆರಿಗೆ ಜೊತೆಗೆ ಹೆಚ್ಚುವರಿಯಾಗಿ 1,01,603 ಕೋಟಿ ರೂ ತೆರಿಗೆ ಹಂಚಿಕೆಯನ್ನು ಬಿಡುಗಡೆ ಮಾಡಲಾಗಿದೆ ಎಂದು ಮಾಹಿತಿ ನೀಡಿದೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು, ಪ್ರಧಾನಿ ನರೇಂದ್ರ ಮೋದಿ ಆಶಯದಂತೆ ಕರ್ನಾಟಕ ಸೇರಿದಂತೆ ಎಲ್ಲಾ 28 ರಾಜ್ಯ ಸರ್ಕಾರಗಳಿಗೂ ಕೇಂದ್ರ ಹಣಕಾಸು ಸಚಿವಾಲಯ ಒಟ್ಟಾರೆ 1,01,603 ಕೋಟಿ ರೂ. ಹೆಚ್ಚುವರಿ ತೆರಿಗೆ ಹಂಚಿಕೆ ಹಣವನ್ನು ಬಿಡುಗಡೆ ಮಾಡಿದೆ ಎಂದು ಹೇಳಿದ್ದಾರೆ.

Leave a Comment

Your email address will not be published. Required fields are marked *