ಗುಟ್ಟಾಗಿ ನಿಶ್ಚಿತಾರ್ಥ ಮಾಡಿಕೊಂಡ ವಿಜಯ್ ದೇವರಕೊಂಡ – ರಶ್ಮಿಕಾ ಮಂದಣ್ಣ| ಮುಂದಿನ ಜನವರಿಯಲ್ಲಿ ಮದುವೆ

ಸಮಗ್ರ ನ್ಯೂಸ್: ಖ್ಯಾತ ನಟಿ ರಶ್ಮಿಕಾ ಮಂದಣ್ಣ ಮತ್ತು ಖ್ಯಾತ ನಟ ವಿಜಯ್ ದೇವರಕೊಂಡ ಅವರ ಕುರಿತಾಗಿ ಅನೇಕ ತಿಂಗಳಿಂದ ಹರಿದಾಡುತ್ತಿದ್ದ ಗುಸು ಗುಸು ನಿಜವಾಗಿದೆ. ಇಬ್ಬರು ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಸಂಬಂಧಿಕರು ಮತ್ತು ಸ್ನೇಹಿತರ ಸಮ್ಮುಖದಲ್ಲಿ ಶುಕ್ರವಾರ ರಶ್ಮಿಕಾ ಮಂದಣ್ಣ -ವಿಜಯ್ ದೇವರಕೊಂಡ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. 2026ರಲ್ಲಿ, ಮದುವೆ ಮಾಡಿಕೊಳ್ಳಲಿದ್ದಾರೆ ಎಂದು ಹೇಳಲಾಗಿದೆ.

Ad Widget ... ..

2018ರಲ್ಲಿ ಬಿಡುಗಡೆಯಾಗಿದ್ದ ತೆಲುಗು ಚಿತ್ರ ‘ಗೀತಾ ಗೋವಿಂದಂ’ನಲ್ಲಿ ಅವರು ಒಟ್ಟಿಗೆ ನಟಿಸಿದ್ದರು. ನಂತರ ಅನೇಕ ಚಿತ್ರಗಳಲ್ಲಿ ನಟಿಸಿದ್ದ ಅವರು ಒಟ್ಟಿಗೆ ಕಾಣಿಸಿಕೊಂಡಿದ್ದು ಪ್ರೀತಿಯಲ್ಲಿದ್ದಾರೆ ಎಂದು ಹೇಳಲಾಗಿತ್ತು. ಶುಕ್ರವಾರ ನಿಶ್ಚಿತಾರ್ಥ ಮಾಡಿಕೊಂಡಿದ್ದು ಫೆಬ್ರವರಿಯಲ್ಲಿ ಮದುವೆ ನೆರವೇರಲಿದೆ ಎಂದು ಹೇಳಲಾಗಿದೆ. ಆದರೆ ಈ ಬಗ್ಗೆ ರಶ್ಮಿಕಾ ಅಥವಾ ವಿಜಯ್ ಅಧಿಕೃತವಾಗಿ ಮಾಹಿತಿ ನೀಡಿಲ್ಲ.

Ad Widget

ರಶ್ಮಿಕಾ ಹಾಗೂ ವಿಜಯ್ ದೇವರಕೊಂಡ ಮೊದಲ ಬಾರಿಗೆ ಭೇಟಿ ಆಗಿದ್ದು ‘ಗೀತ ಗೋವಿಂದಂ’ ಸಿನಿಮಾ ಸೆಟ್​ನಲ್ಲಿ. 2018ರಲ್ಲಿ ಈ ಸಿನಿಮಾ ರಿಲೀಸ್ ಆಯಿತು. ಇವರ ಕೆಮಿಸ್ಟ್ರಿ ಪ್ರೇಕ್ಷಕರಿಗೆ ಸಖತ್ ಇಷ್ಟ ಆಯಿತು. ಈ ಸಿನಿಮಾ ಸೂಪರ್ ಹಿಟ್ ಆಯಿತು. ಅಂದಿನಿಂದ ಇವರ ಬಾಂಡಿಂಗ್ ಸ್ಟ್ರಾಂಗ್ ಆಗುತ್ತಾ ಬರುತ್ತಿದೆ. ಇವರ ಮಧ್ಯೆ ಪ್ರೀತಿ ಮೂಡಿದ್ದು, ಅದಕ್ಕೆ ಈಗ ಹೊಸ ಅರ್ಥ ನೀಡಲಾಗಿದೆ.

ಕೆಲವು ವರದಿಗಳ ಪ್ರಕಾರ ಮನೆಯವರು ಹಾಗೂ ಆಪ್ತರ ಸಮ್ಮುಖದಲ್ಲಿ ರಶ್ಮಿಕಾ ಎಂಗೇಜ್​ಮೆಂಟ್ ಮಾಡಿಕೊಂಡಿದ್ದಾರಂತೆ. ಈ ವಿಷಯವನ್ನು ಗುಟ್ಟಾಗಿ ಇಡುವ ಕಾರಣದಿಂದಲೇ ಎಲ್ಲಿಯೂ ಫೋಟೋ ಲೀಕ್ ಆಗದಂತೆ ನೋಡಿಕೊಳ್ಳಲಾಗಿದೆ ಎನ್ನಲಾಗುತ್ತಿದೆ. ಇನ್ನು ನಿಶ್ಚಿತಾರ್ಥದ ವೇಳೆ ಮದುವೆ ಡೇಟ್ ಕೂಡ ನಿಗದಿ ಆಗಿದೆ ಎನ್ನಲಾಗುತ್ತಿದೆ.

Leave a Comment

Your email address will not be published. Required fields are marked *