2021ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಕಟ| ರಕ್ಷಿತ್ ಶೆಟ್ಟಿ ಅತ್ಯುತ್ತಮ ನಟ, ಅರ್ಚನಾ ಜೋಯಿಸ್ ಶ್ರೇಷ್ಠ ನಟಿ

ಸಮಗ್ರ ನ್ಯೂಸ್: ರಾಜ್ಯ ಸರ್ಕಾರದಿಂದ 2021ನೇ ಸಾಲಿನ ವಾರ್ಷಿಕ ಚಲನಚಿತ್ರ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದೆ. ನಟ ರಕ್ಷಿತ್ ಶೆಟ್ಟಿ ಅಭಿನಯದ ಚಾರ್ಲಿ 777 ಅತ್ಯುತ್ತಮ ನಟ ಪ್ರಶಸ್ತಿ ಸಂದಿದೆ. ಮ್ಯೂಟ್ ಸಿನಿಮಾದ ನಟನೆಗಾಗಿ ಅರ್ಚನಾ ಜೋಯಿಸ್ ಅವರಿಗೆ ಅತ್ಯುತ್ತಮ ನಟಿ ಪ್ರಶಸ್ತಿ ಲಭಿಸಿದೆ.

Ad Widget ... ..

ಇನ್ನೂ ದೊಡ್ಡಹಟ್ಟಿ ಬೈರೇಗೌಡ ಚಿತ್ರಕ್ಕೆ ಅತ್ಯುತ್ತಮ ಮೊದಲ ಚಿತ್ರ, ಯುವರತ್ನಕ್ಕೆ ಅತ್ಯುತ್ತಮ ಮನರಂಜನಾ ಚಿತ್ರ ಪ್ರಶಸ್ತಿ ಲಭಿಸಿದೆ. ರತ್ನನ್ ಪ್ರಪಂಚ ಚಿತ್ರದ ಅಭಿನಯಕ್ಕಾಗಿ ಪ್ರಮೋದ್ ಅವರಿಗೆ ಅತ್ಯುತ್ತಮ ಪೋಷಕ ನಟ ಪ್ರಶಸ್ತಿ ಸಂದಿದ್ದರೇ, ಉಮಾಶ್ರಿ ಅವರಿಗೆ ಅತ್ಯುತ್ತಮ ಪೋಷಕ ನಟಿ ಪ್ರಶಸ್ತಿ ಲಭಿಸಿದೆ. ಕೇಕ್ ಚಿತ್ರದ ನಟನೆಗಾಗಿ ಮಾಸ್ಟರ್ ಅತೀಶ್ ಶೆಟ್ಟಿಗೆ ಅತ್ಯುತ್ತಮ ಬಾಲನಟ ಪ್ರಶಸ್ತಿ ಲಭಿಸಿದ್ದರೇ, ಭೈರವಿ ಚಿತ್ರದ ಅಭಿನಯಕ್ಕಾಗಿ ಬೇಬಿ ಭೈರವಿಗೆ ಅತ್ಯುತ್ತಮ ಬಾಲನಟಿ ಪ್ರಶಸ್ತಿ ನೀಡಲಾಗಿದೆ.

Ad Widget

ಇನ್ನೂ ವಿಶೇಷ ಸಾಮಾಜಿಕ ಕಳಕಳಿ ಚಿತ್ರ ಪ್ರಶಸ್ತಿಯನ್ನು ‘ಭಾರತದ ಪ್ರಜೆಗಳಾದ ನಾವು’ ಸಿನಿಮಾಗೆ ಸಂದಿದ್ದರೇ, ಪುನೀತ್ ರಾಜ್​​ಕುಮಾರ್ ನಟನೆಯ ‘ಯುವರತ್ನ’ ಚಿತ್ರಕ್ಕೆ ‘ಅತ್ಯುತ್ತಮ ಜನಪ್ರಿಯ ಮನರಂಜನಾ ಸಿನಿಮಾ’ ಪ್ರಶಸ್ತಿ ಲಭಿಸಿದೆ. ‘ಕೇಕ್’ ಸಿನಿಮಾಗೆ ಅತ್ಯುತ್ತಮ ಮಕ್ಕಳ ಚಿತ್ರ ಪ್ರಶಸ್ತಿ ಸಂದಿದೆ. ಶಂಕರ್ ಗುರು ಅವರಿಗೆ ‘ಬಡವ ರಾಸ್ಕಲ್’ ಚಿತ್ರಕ್ಕಾಗಿ ‘ಅತ್ಯುತ್ತಮ ಚೊಚ್ಚಲ ನಿರ್ದೇಶನ’ ಪ್ರಶಸ್ತಿ ಘೋಷಿಸಲಾಗಿದೆ.

ಹೀಗಿದೆ 2021ನೇ ಸಾಲಿನ ವಾರ್ಷಿಕ ಚಲನಚಿತ್ರ ಪ್ರಶಸ್ತಿ ಪುರಸ್ಕೃತರ ಪಟ್ಟಿ:

  • ವಿಶೇಷ ಸಾಮಾಜಿಕ ಕಳಕಳಿ ಚಿತ್ರ ಪ್ರಶಸ್ತಿ: ಭಾರತದ ಪ್ರಜೆಗಳಾದ ನಾವು
  • ಅತ್ಯುತ್ತಮ ಮಕ್ಕಳ ಚಿತ್ರ ಪ್ರಶಸ್ತಿ: ಕೇಕ್
  • ಅತ್ಯುತ್ತಮ ಚೊಚ್ಚಲ ನಿರ್ದೇಶನ’ ಪ್ರಶಸ್ತಿ: ಶಂಕರ್ ಗುರು (ಬಡವ ರಾಸ್ಕಲ್) ಅತ್ಯುತ್ತಮ ಪ್ರಾದೇಶಿಕ ಭಾಷಾ ಸಿನಿಮಾ: ಕೊಡವ ಭಾಷೆಯ “ನಾಡ ಪೆದ ಆಶಾ”
  • ಅತ್ಯುತ್ತಮ ಹಿನ್ನೆಲೆ ಗಾಯಕಿ ಪ್ರಶಸ್ತಿ: ಸಹನಾ ಎಂ.ಭಾರದ್ವಾಜ್
  • ಅತ್ಯುತ್ತಮ ಹಿನ್ನೆಲೆ ಗಾಯಕ: ಅನೀಶ್ ಕೇಶವ ರಾವ್
  • ಅತ್ಯುತ್ತಮ ಕಲಾ ನಿರ್ದೇಶನ: ರವಿ ಸಂತೇಹಕ್ಲು (ಭಜರಂಗಿ 2)
  • ಅತ್ಯುತ್ತಮ ಗೀತ ರಚನೆ: ನಾಗಾರ್ಜುನ ಶರ್ಮ (777 ಚಾರ್ಲಿ)
  • ಅತ್ಯುತ್ತಮ ನಿರ್ಮಾಣ ನಿರ್ವಾಹಕ: ಶಿವಕುಮಾರ್ (ಪೊಗರು)
  • ಅತ್ಯುತ್ತಮ ಸಂಕಲನ: ಪ್ರತೀಶ್ ಶೆಟ್ಟಿ (777 ಚಾರ್ಲಿ)
  • ಅತ್ಯುತ್ತಮ ಕಥೆ: ಮಂಜುನಾಥ್ ಮುನಿಯಪ್ಪ (9 ಸುಳ್ಳು ಕಥೆಗಳು)
  • ಅತ್ಯುತ್ತಮ ವಸ್ತ್ರ ವಿನ್ಯಾಸ: ಯೋಗಿ ಜಿ ರಾಜು (ಭಜರಂಗಿ 2)
  • ಅತ್ಯುತ್ತಮ ಚಿತ್ರ: ಭೈರವಿ
  • ಅತ್ಯುತ್ತಮ ಸಂಭಾಷಣೆ: ಬರಗೂರು ರಾಮಚಂದ್ರಪ್ಪ (ತಾಯಿ ಕಸ್ತೂರಿ ಗಾಂಧಿ)

Leave a Comment

Your email address will not be published. Required fields are marked *