ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್| ರಾಜ್ಯದ ಹಲವು ಕಡೆ ದಾಳಿ

ಸಮಗ್ರ ನ್ಯೂಸ್: ಆದಾಯ ಮೀರಿ ಆಸ್ತಿ ಗಳಿಕೆ ಸಂಬಂಧ ದಾವಣಗೆರೆ, ಚಿತ್ರದುರ್ಗ ಸೇರಿದಂತೆ ಹಲವು ಕಡೆ ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

Ad Widget ... ..

ದಾವಣಗೆರೆಯಲ್ಲಿ ಇಬ್ಬರು ಅಧಿಕಾರಿಗಳ ಮೇಲೆ ಲೋಕಾಯಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕೆಆರ್ ಐಡಿಎಲ್ ಸಹಾಯಕ ಇಂಜಿನಿಯರ್ ಜಗದೀಶ್ ನಾಯ್ಕ್, ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಎಸ್ ಡಿಎ ನಡುವಿನ ಮನೆ ಇಬ್ಬರು ಅಧಿಕಾರಿಗಳ ಸೇರಿದ 10 ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.

Ad Widget

ಚಿತ್ರದುರ್ಗದಲ್ಲಿ ಬೆಳ್ಳಂಬೆಳಗ್ಗೆ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ನೀಡಿದ್ದು, ಚಿತ್ರದುರ್ಗದ ಹಲವು ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕೃಷಿ ಇಲಾಖೆ ಎಡಿ ಚಂದ್ರಕಾಂತ್ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಎರಡು ಮನೆ, ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

ಚಿತ್ರದುರ್ಗದ ತರಳಬಾಳು ನಗರದಲ್ಲಿರುವ ಅಧಿಕಾರಿ ಚಂದ್ರಕಾಂತ್ ಮನೆ ಮೇಲೆ ದಾಳಿ ನಡೆಸಲಾಗಿದ್ದು, ಕೃಷಿ ಇಲಾಖೆ ಕಚೇರಿಯಲ್ಲಿ ಪರಿಶೀಲನೆ ನಡೆಸಲಾಗಿದೆ. ಹೊಳಲ್ಕೆರೆ ತಾಲೂಕಿನ ಟಿ. ನುಲೇನೂರು ಗ್ರಾಮದ ಮನೆಯಲ್ಲೂ ಶೋಧ ನಡೆಸಲಾಗಿದೆ ಎಂದು ತಿಳಿದುಬಂದಿದೆ.

Leave a Comment

Your email address will not be published. Required fields are marked *