ಸಾಮೂಹಿಕ ಅತ್ಯಾಚಾರಕ್ಕೆ ಸಂಚು ಹೂಡುತ್ತಿದ್ದ ನಾಲ್ಕು ಮಂದಿಯ ಬಂಧನ| ಇಬ್ಬರು ಬಾಲಕಿಯರ ರಕ್ಷಣೆ

ಸಮಗ್ರ ನ್ಯೂಸ್: ನಿಡ್ಡೋಡಿ ಗ್ರಾಮದ ಕಲ್ಲಕುಮೇರಿನ ಮನೆಯೊಂದಕ್ಕೆ ಮೂಡುಬಿದಿರೆ ಪೊಲೀಸ್ ಇನ್‍ಸ್ಪೆಕ್ಟರ್ ಸಂದೇಶ್ ಕುಮಾರ್ ನೇತೃತ್ವದ ಪೊಲೀಸರ ತಂಡ ಸೋಮವಾರ ರಾತ್ರಿ ದಾಳಿ ನಡೆಸಿ ನಾಲ್ವರು ಯುವಕರನ್ನು ಬಂಧಿಸಿದ್ದು, ಇಬ್ಬರು ಬಾಲಕಿಯರನ್ನು ರಕ್ಷಿಸಿದ್ದಾರೆ.

Ad Widget . Ad Widget . Ad Widget . Ad Widget . Ad Widget . Ad Widget .

ನಿಡ್ಡೋಡಿ ಕಲ್ಲಕುಮೇರಿನ ಮಹೇಶ, ಕಟೀಲಿನ ಯಜ್ಞೇಶ್, ಮೂಲ್ಕಿ ನಡುಗೊಡೆಯ ದಿಲೀಪ್, ಬಜಪೆ ಕೊಂಡೆಮೂಲೆಯ ಶ್ರೀಕಾಂತ್ ಬಂಧಿತರು. ಅವರ ವಿರುದ್ಧ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಆರೋಪಿಗಳು ಸಾಮೂಹಿಕ ಅತ್ಯಾಚಾರಕ್ಕೆ ಸಿದ್ಧತೆ ನಡೆಸುತ್ತಿದ್ದರು ಎಂಬುದು ಪೊಲೀಸರ ವಿಚಾರಣೆಯಲ್ಲಿ ಗೊತ್ತಾಗಿದೆ.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಸಂತ್ರಸ್ತ ಬಾಲಕಿಯರು ಮತ್ತು ಆರೋಪಿಗಳನ್ನು ಠಾಣೆಗೆ ಕರೆತಂದು ವಿಚಾರಿಸಿದಾಗ ಘಟನೆಯ ವಿವರಗಳನ್ನು ಬಾಯಿಬಿಟ್ಟಿದ್ದಾರೆ. ಪ್ರಕರಣದ ಪ್ರಮುಖ ಆರೋಪಿ ಕಲ್ಲಕುಮೇರಿನ ಮಹೇಶ್ ಎಂದು ಗುರುತಿಸಲಾಗಿದ್ದು, ತನ್ನ ಮನೆಯನ್ನೇ ಈ ಕೃತ್ಯಕ್ಕೆ ಬಳಸಿಕೊಂಡಿದ್ದ ಎನ್ನಲಾಗಿದೆ. ಈ ಆರೋಪಿಗಳು ಗಾಂಜಾ ವ್ಯವಹಾರದಲ್ಲೂ ತೊಡಗಿಸಿದ್ದ ಆರೋಪ ಇದ್ದು, ಪೊಲೀಸ್ ತನಿಖೆ ನಡೆಯುತ್ತಿದೆ.

Leave a Comment

Your email address will not be published. Required fields are marked *