ಪುತ್ತೂರು: ಆಟೋ ಚಾಲಕನ ಮೇಲೆ ಟ್ರಾಪಿಕ್ ಪೊಲೀಸರ ದರ್ಪ

ಸಮಗ್ರ ನ್ಯೂಸ್: ಪುತ್ತೂರು ನಗರದ ದರ್ಬೆ ಸಮೀಪ ಆಟೋ ರಿಕ್ಷಾ ಚಾಲಕರೊಬ್ಬರ ಮೇಲೆ ಸಂಚಾರಿ ಪೊಲೀಸರು ಹಲ್ಲೆ ನಡೆಸುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಘಟನೆ ಶುಕ್ರವಾರ ಸಂಜೆ ದರ್ಬೆಯಿಂದ ಮಾಣಿ ಮೈಸೂರು ಹೆದ್ದಾರಿಗೆ ಸಂಪರ್ಕಿಸುವ ಮುಖ್ಯ ರಸ್ತೆಯಲ್ಲಿ ನಡೆದಿದೆ. ಸಂಚಾರಿ ಪೊಲೀಸರ ವರ್ತನೆಯ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿದ್ದಾರೆ.

Ad Widget ... ..

ವೈರಲ್ ಆಗಿರುವ ವಿಡಿಯೋದಲ್ಲಿ, ದ್ವಿಚಕ್ರ ವಾಹನದಲ್ಲಿ ಬಂದ ಇಬ್ಬರು ಸಂಚಾರಿ ಠಾಣೆಯ ಪೊಲೀಸರು ಆಟೋ ರಿಕ್ಷಾಕ್ಕೆ ಅಡ್ಡಲಾಗಿ ಬಂದು ಚಾಲಕನ ಮೇಲೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸುವುದು ಕಂಡುಬರುತ್ತದೆ. ಆದ್ರೆ ಪೊಲೀಸರು ಆಟೋಚಾಲಕನ ವಿರುದ್ಧ ಆ ರೀತಿ ಯಾಕೇ ವರ್ತಿಸಿದ್ದರು ಎನ್ನುವುದು ಸ್ಪಷ್ಟವಾಗಿಲ್ಲ.

Ad Widget

ಮೂಲಗಳ ಪ್ರಕಾರ, ಹಲ್ಲೆಗೊಳಗಾದ ಆಟೋ ಚಾಲಕ (ಮುಕೈ ನಿವಾಸಿ) ಶುಕ್ರವಾರ ಸಂಜೆ ದರ್ಬೆ ಸಮೀಪದ ಬೈಪಾಸ್ ರಸ್ತೆಯಲ್ಲಿ ಆಟೋ ನಿಲ್ಲಿಸಿ ಮೊಬೈಲ್ನಲ್ಲಿ ಮಾತನಾಡುತ್ತಿದ್ದರು. ಈ ವೇಳೆ ಆಗಮಿಸಿದ ಸಂಚಾರಿ ಪೊಲೀಸರು ಆಟೋ ಮುಂದೆ ತಮ್ಮ ಬೈಕ್ ನಿಲ್ಲಿಸಿದ್ದಾರೆ. ಈ ವೇಳೆ ಆಟೋ ಚಾಲಕ ಡಿವೈಡರ್ ದಾಟಿ ಅಶ್ವಿನಿ ವೃತ್ತದ ಕಡೆಗೆ ತೆರಳಿದ್ದಾರೆ ಎನ್ನಲಾಗಿದೆ.

ವೀಡಿಯೊದಲ್ಲಿ ಇಬ್ಬರು ಪೊಲೀಸರ ತಪ್ಪು ಸ್ಪಷ್ಟವಾಗಿ ತೋರುತ್ತಿದ್ದು, ಘಟನೆಯ ಕಾರಣವನ್ನು ಪರಿಶೀಲಿಸಲಾಗುವುದು ಮತ್ತು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಇಲಾಖೆಯ ಪ್ರಕಟಣೆ ತಿಳಿಸಿದೆ. ಸಾರ್ವಜನಿಕ ವಲಯದಲ್ಲಿ ಈ ಘಟನೆ ಬಗ್ಗೆ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ತಪ್ಪಿತಸ್ಥ ಪೊಲೀಸರ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯ ಕೇಳಿಬಂದಿದೆ.

Leave a Comment

Your email address will not be published. Required fields are marked *