ಪುತ್ತೂರು: ಅಕ್ರಮ‌ ಗೋಸಾಗಾಟ ಮಾಡುತ್ತಿದ್ದವರಿಗೆ ಪೊಲೀಸರಿಂದ ಗುಂಡೇಟು| ಗೋಪೂಜೆ ದಿನದಂದು ಸಿಕ್ಕಿಬಿದ್ದ ಗೋಕಳ್ಳರು

ಸಮಗ್ರ ನ್ಯೂಸ್: ಅಕ್ರಮ ಗೋಸಾಗಾಟ ನಡೆಸುತ್ತಿದ್ದ ತಂಡಕ್ಕೆ ಪುತ್ತೂರು ತಾಲೂಕಿನ ಈಶ್ವರಮಂಗಲ ಸಮೀಪದ ಬೆಳ್ಳಿಚಡವು ಎಂಬಲ್ಲಿ ನಸುಕಿನ ಜಾವ ಪೊಲೀಸರು ಶಾಕ್‌ ನೀಡಿದ್ದಾರೆ. ಅನಧಿಕೃತ ಗೋ ಸಾಗಾಟಗಾರರ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದು, ಓರ್ವ ವ್ಯಕ್ತಿ ಗಾಯಗೊಂಡಿದ್ದು ಮತ್ತೊಬ್ಬ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ. ಗಾಯಾಳುವನ್ನು ಆರೋಪಿಯನ್ನು ವೆನ್ಲಾಕ್ ಆಸ್ಪತ್ರೆಗೆ ಚಿಕಿತ್ಸೆಗೆ ಕರೆದುಕೊಂಡು ಹೋಗಲಾಗಿದೆ. ಈತ ಕೇರಳದ ಕಾಸರಗೋಡು ನಿವಾಸಿ ಅಬ್ದುಲ್ಲಾ (40 ವರ್ಷ), ಎಂದು ಗುರುತಿಸಲಾಗಿದೆ.

Ad Widget ... ..

ಘಟನೆಯ ವಿವರ:
ಮೂಲಗಳ ಪ್ರಕಾರ ಗೋವುಗಳನ್ನು ಅನಧಿಕೃತವಾಗಿ ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಪಡೆದ ಸಂಪ್ಯ ಪೊಲೀಸ್ ಉಪನಿರೀಕ್ಷಕ ಜಂಬೂರಾಜ್ ನೇತೃತ್ವದ ಪೊಲೀಸ್ ತಂಡ ಬುಧವಾರ ಬೆಳಗಿನ ಜಾವ ಬೆಳ್ಳಿಚಡವು ಪ್ರದೇಶಕ್ಕೆ ತೆರಳಿತ್ತು. ಈ ವೇಳೆ ಅಕ್ರಮವಾಗಿ ಗೋವುಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ಪತ್ತೆಯಾಗಿದ್ದು, ಪೊಲೀಸರು ಅದನ್ನು ಹಿಂಬಾಲಿಸಲು ಆರಂಭಿಸಿದ್ದಾರೆ. ಪೊಲೀಸರ ಬೆನ್ನಟ್ಟುವಿಕೆಯಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ಲಾರಿ ಚಾಲಕ, ಪೊಲೀಸ್ ವಾಹನಕ್ಕೆ ಡಿಕ್ಕಿ ಹೊಡೆದಿದ್ದಾನೆ ಎನ್ನಲಾಗಿದೆ. ಅಲ್ಲದೇ ಪೊಲೀಸರ ಮೇಲೆ ದಾಳಿಯನ್ನು ನಡೆಸಿದ್ದಾನೆ ಎಂದು ಹೇಳಲಾಗುತ್ತಿದೆ.

Ad Widget

ಈ ವೇಳೆ ಪೊಲೀಸರು ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದ್ದು, ಅದು ಲಾರಿ ಚಾಲಕನಿಗೆ ತಗುಲಿ ಗಾಯಗೊಂಡಿರುವುದಾಗಿ ತಿಳಿದುಬಂದಿದೆ. ಗಾಯಗೊಂಡ ವ್ಯಕ್ತಿಯನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಮತ್ತೊಬ್ಬ ಆರೋಪಿ ಕತ್ತಲೆಯಲ್ಲಿ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಕಾರ್ಯಾಚರಣೆ ವೇಳೆ ಸುಮಾರು 10ಕ್ಕೂ ಹೆಚ್ಚು ದನಗಳನ್ನು ರಕ್ಷಿಸಲಾಗಿದೆ ಎಂದು ಹೇಳಲಾಗುತ್ತಿದೆ. ಆದರೆ, ಪೊಲೀಸ್‌ ಇಲಾಖೆ ಈ ಮಾಹಿತಿಯನ್ನು ಇನ್ನಷ್ಟೇ ಖಚಿತಪಡಿಸಬೇಕಿದೆ. ಶೂಟೌಟ್ ನಡೆದ ಸ್ಥಳವು ಕೇರಳ ಗಡಿಗೆ ಕೆಲವೇ ಮೀಟರ್‌ ದೂರದಲ್ಲಿದ್ದು, ದುಷ್ಕರ್ಮಿಗಳು ಗೋವುಗಳನ್ನು ಕೇರಳಕ್ಕೆ ಸಾಗಿಸುವ ಪ್ರಯತ್ನದಲ್ಲಿದ್ದರು ಎಂದು ಮೇಲ್ನೋಟಕ್ಕೆ ಕಾಣಿಸುತ್ತಿತ್ತು ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ದೀಪಾವಳಿ ಗೋಪೂಜೆ ದಿನದಂದೇ ಈ ಘಟನೆ ನಡೆದಿದೆ.

10 ಜಾನುವಾರಗಳನ್ನು ಐಚರ್ ವಾಹನದಲ್ಲಿ ಅನಧಿಕೃತವಾಗಿ ಸಾಗಿಸುತ್ತಿದ್ದಾಗ, ವಾಹನವನ್ನು ನಿಲ್ಲಿಸಲು ಪೊಲೀಸರು ಸೂಚಿಸಿದಾಗ ಆತನು ನಿಲ್ಲಿಸದೆ ಇದ್ದು ಪೊಲೀಸ್‌ರು ಸುಮಾರು 10 ಕಿಮೀ ದೂರ ವಾಹನವನ್ನು ಬೆನ್ನಟ್ಟಿದರು, ಆರೋಪಿಯು ಪೊಲೀಸ್ ಜೀಪಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿರುತ್ತಾನೆ. ಆಗ ಪಿಎಸ್ಐ ರವರು ಎರಡು ಸುತ್ತು ಗುಂಡುಗಳನ್ನು ಫೈಯರ್ ಮಾಡಿದ್ದಾರೆ ಒಂದನ್ನು ಐಚರ್ ವಾಹನದ ಮೇಲೆ ಹಾಗೂ ಮತ್ತೊಂದು ಆರೋಪಿಯ ಕಾಲಿಗೆ ಬಿದ್ದಿರುತ್ತದೆ. ಘಟನೆಯ ಸಮಯದಲ್ಲಿ ಇನ್ನೊಬ್ಬ ಆರೋಪಿಯು ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಪೊಲೀಸರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Leave a Comment

Your email address will not be published. Required fields are marked *