ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ| ಹಬ್ಬದ ಸಂಭ್ರಮ ಇಮ್ಮಡಿಗೊಳಿಸಿದ ಚೀನಿವಾರಪೇಟೆ

ಸಮಗ್ರ ನ್ಯೂಸ್: ಚಿನ್ನದ ಬೆಲೆಯ (gold rate) ಏರಿಳಿಕೆ ಆಟ ನಡೆಯುತ್ತಿದೆ. ಹಳದಿ ಲೋಹದ ಬೆಲೆ ಗ್ರಾಮ್​ಗೆ 500ಕ್ಕೂ ಹೆಚ್ಚು ರೂಗಳಷ್ಟು ಕಡಿಮೆ ಆಗಿದೆ. ಭಾರತದಲ್ಲಿ ಮಾತ್ರವಲ್ಲ, ವಿದೇಶಗಳಲ್ಲೂ ಹೆಚ್ಚಿನ ಕಡೆ ಬೆಲೆ ಇಳಿಕೆಯಾಗಿದೆ. ಬೆಳ್ಳಿ ಬೆಲೆಯಂತೂ ಭರ್ಜರಿ ಇಳಿಕೆ ಮುಂದುವರಿಸಿದೆ.

Ad Widget ... ..

ಇಂದು ಅದರ ಬೆಲೆ ಗ್ರಾಮ್​ಗೆ ಬರೋಬ್ಬರಿ 8 ರೂಗಳಷ್ಟು ಕಡಿಮೆ ಆಗಿದೆ. 162 ರೂಗೆ ಬೆಲೆ ಇಳಿಕೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,16,600 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,27,200 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 16,200 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,16,600 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 16,390 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 18,000 ರೂ ಇದೆ.

Ad Widget

ಚಿನ್ನ ಮತ್ತು ಬೆಳ್ಳಿಯ ಬೆಲೆಗಳು ಇಂದು ಗಣನೀಯವಾಗಿ ಇಳಿಕೆಯಾಗಿದ್ದು, ಬುಲಿಯನ್ ಮಾರುಕಟ್ಟೆಯಲ್ಲಿ ಚಿನ್ನದ ದರ ಗ್ರಾಮಿಗೆ ₹500ಕ್ಕೂ ಹೆಚ್ಚು ಇಳಿಕೆಯಾಗಿದೆ. ಬೆಳ್ಳಿ ದರವೂ ಸತತವಾಗಿ ಇಳಿಯುತ್ತಿದ್ದು, ಗ್ರಾಂಗೆ ₹8ರಷ್ಟು ಕಡಿಮೆಯಾಗಿದೆ. ಇಂದು ಒಂದೇ ದಿನಕ್ಕೆ 3380 ರೂಪಾಯಿ ಕಡಿಮೆ ಆಗಿದೆ.

Leave a Comment

Your email address will not be published. Required fields are marked *