ಬೆಳ್ತಂಗಡಿ| ತಾ.ಪಂ ಮಾಜಿ ಉಪಾಧ್ಯಕ್ಷ ಆತ್ಮಹತ್ಯೆ

Ad Widget ... ..

ಬೆಳ್ತಂಗಡಿ: ಬೆಳ್ತಂಗಡಿ ತಾಲ್ಲೂಕು ಪಂಚಾಯಿತಿ ಮಾಜಿ ಉಪಾಧ್ಯಕ್ಷ, ಲಾಯಿಲ ನಿವಾಸಿ ಸಂತೋಷ್ ಕುಮಾರ್ (47) ಶನಿವಾರ ಸರ್ಕಾರಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು ಅವಿವಾಹಿತರಾಗಿದ್ದರು.

Ad Widget

ಕೆಲ‌ ವರ್ಷಗಳ ಹಿಂದೆ ಅಪಘಾತವೊಂದರಲ್ಲಿ ಬೆನ್ನುಮೂಳೆ ಮುರಿತಕ್ಕೊಳಗಾಗಿದ್ದರು.
ಕೆಲ ಸಮಯ ಚಾಪೆ ಹಿಡಿದಿದ್ದ ಅವರು, ಕೊಕ್ಕಡದ ಸೇವಾಧಾಮ ಬೆನ್ನುಮೂಳೆ ಮುರಿತಕ್ಕೊಳಗಾದವರ ಆರೈಕೆ ಕೇಂದ್ರದಿಂದ ಚಿಕಿತ್ಸೆ ಮತ್ತು ಫಿಸಿಯೋಥೆರಫಿ ಪಡೆದು ಚೇತರಿಸಿಕೊಂಡು ಸ್ವಾವಲಂಬಿಯಾಗಿ ದುಡಿಯುತ್ತಿದ್ದರು.

ಉಜಿರೆ- ಬೆಳ್ತಂಗಡಿ ಅಪೆ ರಿಕ್ಷಾ ಚಾಲಕ ಮಾಲೀಕರ‌ ಸಂಘದ ಪದಾಧಿಕಾರಿಯಾಗಿ, ಲಾಯಿಲ ಗಣೇಶೋತ್ಸವ ಸಮಿತಿ,ಕೃಷ್ಣ ಜನ್ಮಾಷ್ಟಮಿ ಸಮಿತಿ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳಲ್ಲಿ ತೊಡಗಿಸಿಕೊಂಡಿದ್ದರು.

ತಮ್ಮ ದೀರ್ಘಕಾಲಿಕ ಅನಾರೋಗ್ಯದಿಂದಲೇ ಬೇಸತ್ತು ಅವರು ಜೀವನದಲ್ಲಿ ಜಿಗುಪ್ಸೆ ಹೊಂದಿ‌ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.

Leave a Comment

Your email address will not be published. Required fields are marked *