ಪುತ್ತೂರು: ಅಪಘಾತದಲ್ಲಿ ಸಾವನ್ನಪ್ಪಿದ ಮಗಳ ಬಳಿಕ ತಂದೆಯೂ ಸಾವು

ಸಮಗ್ರ ನ್ಯೂಸ್: ಅಪೂರ್ವ ಭಟ್ ಚೇತರಿಕೆಗೆ ಇಡೀ ರಾಜ್ಯ ಪ್ರಾರ್ಥಿಸಿತ್ತು. ರಸ್ತೆ ಅಪಘಾತದಲ್ಲಿ ಗಾಯಗೊಂಡ ಅಪೂರ್ವ ಭಟ್ ಬರುವಿಕೆಗಾಗಿ ಮೂರು ವರ್ಷದ ಮಗಳು, ಪತಿ ಆಶಿಶ್ ಸಾರಡ್ಕ ಹಗಳಿರುಳು ಪ್ರಾರ್ಥಿಸಿದ್ದರು. ಆದರೆ ಬರೋಬ್ಬರಿ 130 ದಿನ ಕೋಮಾದಲ್ಲಿದ್ದ ಅಪೂರ್ವ ಭಟ್ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದರು.

Ad Widget ... ..

ಇದರ ಬೆನ್ನಲ್ಲೇ ಇದೇ ಅಪಘಾತದಲ್ಲಿ ಗಾಯಗೊಂಡಿದ್ದ ಅಪೂರ್ವ ಭಟ್ ತಂದೆ ಈಶ್ವರ್ ಭಟ್ ನಿಧನರಾಗಿದ್ದಾರೆ. ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಈಶ್ವರ್ ಭಟ್‌ಗೆ ಚಿಕಿತ್ಸೆ ನೀಡಲಾಗುತ್ತಿತ್ತು.

Ad Widget

ಕಳೆದ 9 ತಿಂಗಳ ಹಿಂದೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಮುರ ಎಂಬಲ್ಲಿ ಬಸ್- ಕಾರು ನಡುವೆ ಡಿಕ್ಕಿ ಸಂಭವಿಸಿ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೆದಿಲ ಗ್ರಾಮದ ಅಂಡೆಪುಣಿ ನಿವಾಸಿ ಈಶ್ವರ ಭಟ್ (70) ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ (ನ.03) ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಇದೇ ಘಟನೆಯಲ್ಲಿ ಗಂಭೀರ ಗಾಯಗೊಂಡು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಈಶ್ವರ ಭಟ್ ಅವರ ಪುತ್ರಿ ಅಪೂರ್ವ ಭಟ್ (32) ಅವರು ಕೆಲ ದಿನಗಳ ಹಿಂದಷ್ಟೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದರು. ಇದೀಗ ತಂದೆಯೂ ನಿಧನರಾಗಿದ್ದಾರೆ. 130 ದಿನಗಳಿಗೂ ಅಧಿಕ ಕಾಲ ಆಸ್ಪತ್ರೆಯಲ್ಲಿ ಕೋಮಾ ಸ್ಥಿತಿಯಲ್ಲಿ ಚಿಕಿತ್ಸೆ ಪಡೆದ ಅಪೂರ್ವ ಅವರ ಆರೋಗ್ಯ ಸ್ಥಿತಿ ಕುರಿತು ಅವರ ಪತಿ ಆಶೀಶ್ ಸಾರಡ್ಕ ಅವರು ಜಾಲತಾಣಗಳಲ್ಲಿ ನಿರಂತರವಾಗಿ ಮಾಹಿತಿ ಹಂಚಿಕೊಂಡಿದ್ದು, ಸಾವಿರಾರು ಮಂದಿ ಅವರ ಆರೋಗ್ಯ ಚೇತರಿಕೆಗೆ ಪ್ರಾರ್ಥಿಸಿದ್ದರು. ಈ ವಿಚಾರ ರಾಜ್ಯಾದ್ಯಂತ ಸುದ್ದಿಯಾಗಿತ್ತು.

Leave a Comment

Your email address will not be published. Required fields are marked *