ಹವಾಮಾನ ವರದಿ| ರಾಜ್ಯದ ಹಲವೆಡೆ ಭಾರೀ ಮಳೆ‌ ಮುನ್ಸೂಚನೆ

ಸಮಗ್ರ ನ್ಯೂಸ್: ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ನವೆಂಬರ್ 5 ರ ಇಂದಿನಿಂದ 4-5 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Ad Widget ... ..

ಇಂದಿನಿಂದ ರಾಜಧಾನಿ ಬೆಂಗಳೂರು ಸೇರಿದಂತೆ ಕರಾವಳಿ, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಮೀನುಗಾರರು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.

Ad Widget

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆ ಹಿನ್ನೆಲೆ ಜನರು ಮತ್ತು ಮೀನುಗಾರರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಇಂದಿನಿಂದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರಾವಳಿ ಮತ್ತು ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Leave a Comment

Your email address will not be published. Required fields are marked *