ಕಬ್ಬಿಗೆ ಎಂಆರ್ ಪಿ ನಿರ್ಧರಿಸಬೇಕಿರುವುದು ಕೇಂದ್ರವೇ ಹೊರತು ರಾಜ್ಯವಲ್ಲ| ಕೇಂದ್ರದತ್ತ ಚೆಂಡು ಎಸೆದ ಸಿಎಂ ಸಿದ್ದರಾಮಯ್ಯ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಕಬ್ಬು ಬೆಳೆಗಾರರ ಪ್ರತಿಭಟನೆ ತೀವ್ರಗೊಳ್ಳುತ್ತಿರುವಂತೆಯೇ, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಬ್ಬಿನ ದರ ನಿಗದಿಯ ಜವಾಬ್ದಾರಿಯನ್ನು ನೇರವಾಗಿ ಕೇಂದ್ರ ಸರ್ಕಾರದ ಮೇಲೆ ಹೊರಿಸಿದ್ದಾರೆ. ‘ಕಬ್ಬಿಗೆ ಗರಿಷ್ಠ ಚಿಲ್ಲರೆ ಮಾರಾಟ ದರ (MRP) ನಿಗದಿ ಮಾಡಬೇಕಿರುವುದು ಕೇಂದ್ರವೇ ಹೊರತು ರಾಜ್ಯ ಸರ್ಕಾರವಲ್ಲ’ ಎಂದು ಸ್ಪಷ್ಟಪಡಿಸುವ ಮೂಲಕ, ರಾಜ್ಯ ಸರ್ಕಾರದ ಮೇಲಿನ ಒತ್ತಡವನ್ನು ತಗ್ಗಿಸಿ, ಹೋರಾಟದ ದಿಕ್ಕನ್ನು ಕೇಂದ್ರದತ್ತ ತಿರುಗಿಸುವ ರಾಜಕೀಯ ನಡೆ ಪ್ರದರ್ಶಿಸಿದ್ದಾರೆ.

Ad Widget ... ..

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ‘ಕಬ್ಬು ಬೆಳೆಗಾರರು ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಬೆಳಗಾವಿ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆಸುತ್ತಿರುವುದು ನನ್ನ ಗಮನಕ್ಕೆ ಬಂದಿದೆ’ ಎಂದರು.

Ad Widget

‘ನೆರೆಯ ಮಹಾರಾಷ್ಟ್ರದಲ್ಲಿ ಕಬ್ಬಿಗೆ ಹೆಚ್ಚಿನ ದರ ನೀಡಲಾಗುತ್ತಿದೆ. ಅದೇ ಮಾದರಿಯಲ್ಲಿ ನಮ್ಮ ರಾಜ್ಯದಲ್ಲೂ ದರ ನಿಗದಿ ಮಾಡಬೇಕು ಎಂಬುದು ಅವರ ಪ್ರಮುಖ ಬೇಡಿಕೆಯಾಗಿದೆ. ಈ ಕುರಿತು ರೈತ ಮುಖಂಡರೊಂದಿಗೆ ಚರ್ಚಿಸಿ, ಸೌಹಾರ್ದಯುತ ಪರಿಹಾರ ಕಂಡುಕೊಳ್ಳಲು ಸಚಿವರಾದ ಸತೀಶ ಜಾರಕಿಹೊಳಿ, ಶಿವಾನಂದ ಪಾಟೀಲ ಹಾಗೂ ಎಂ.ಬಿ. ಪಾಟೀಲ ಅವರಿಗೆ ಸೂಚನೆ ನೀಡಿದ್ದೇನೆ’ ಎಂದು ತಿಳಿಸಿದರು. ಈ ಮೂಲಕ ರೈತರ ಸಮಸ್ಯೆಗೆ ಸರ್ಕಾರ ಸ್ಪಂದಿಸುತ್ತಿದೆ ಎಂಬ ಸಂದೇಶವನ್ನು ರವಾನಿಸಿದರು.

‘ರೈತರು 3,500 ಪ್ರತಿ ಟನ್ ಕಬ್ಬಿಗೆ ನೀಡಬೇಕು ಎಂಬುದಾಗಿ ರೈತರು ಒತ್ತಾಯಿಸುತ್ತಿದ್ದಾರೆ. ನಾನು ವಿವಿಧ ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ. ನಾವು 3,200 ರೂಪಾಯಿ ಪ್ರತಿ ಟನ್ ಕಬ್ಬಿಗೆ ನೀಡಲು ನಿರ್ಧರಿಸಿದ್ದೇವೆ. 11.25 ರಿಕವರಿ ಬಂದರೇ 3,500 ರೂಪಾಯಿ, 10.25 ರಿಕವರಿ ಬಂದರೇ 3,100 ರೂಪಾಯಿ ಪ್ರತಿ ಟನ್ ಗೆ ನೀಡಲಾಗುತ್ತದೆ. ಇದನ್ನು ರೈತರಿಗೆ ಈಗಾಗಲೇ ಮುಟ್ಟಿಸಲಾಗಿದೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಘೋಷಿಸಿದ್ದಾರೆ.

ಸಕ್ಕರೆ ರಪ್ತು ಮಾಡುವುದನ್ನು ನಿಲ್ಲಿಸಲಾಗಿದೆ. ಇಡೀ ದೇಶಕ್ಕೆ ಕೇವಲ 10 ಲಕ್ಷ ಮೆಟ್ರಿಕ್ ಟನ್ ಮಾತ್ರವೇ ರಪ್ತು ಮಾಡಲು ಕೇಂದ್ರ ಸರ್ಕಾರ ಅವಕಾಶ ಮಾಡಿಕೊಟ್ಟಿದೆ. ಕರ್ನಾಟಕದಲ್ಲಿ 41 ಲಕ್ಷ ಮೆಟ್ರಿಕ್ ಟನ್ ಸಕ್ಕರೆ ಉತ್ಪಾದನೆಯಾಗುತ್ತಿದೆ ಎಂದು ಹೇಳಿದರು.

ರೈತರ ಮುಗ್ದತೆಯನ್ನು ಬಳಸಿಕೊಂಡು ರೈತರಿಗೆ ತಪ್ಪು ಮಾಹಿತಿ ನೀಡಿ, ಕೇಂದ್ರ ಸರ್ಕಾರದ ಜವಾಬ್ದಾರಿಯಿದ್ದರೂ ಕೂಡ, ವಿರೋಧ ಪಕ್ಷದವರು ರಾಜಕೀಯ ಮಾಡಲು ಹೊರಟಿದ್ದಾರೆ. ನಾನು ರೈತರಲ್ಲಿ ಮನವಿ ಮಾಡುತ್ತೇನೆ. ವಿರೋಧ ಪಕ್ಷದವರ ಮಾತಿಗೆ ಬಲಿಯಾಗಬೇಡಿ. ನಾಳೆ ಬೆಂಗಳೂರಿನಲ್ಲಿ 11 ಗಂಟೆಗೆ ರಾಜ್ಯದ ಎಲ್ಲಾ ಸಕ್ಕರೆ ಕಾರ್ಖಾನೆಗಳ ಮಾಲೀಕರ ಜೊತೆಗೆ ಸಭೆ ನಡೆಸಲಾಗುತ್ತಿದೆ. ನಾಳೆಯ ಸಭೆಯಲ್ಲಿ ರೈತರ ಪ್ರತಿಭಟನೆ ಬಗ್ಗೆ, ಎಫ್‌ಆರ್ ಸಿ ಬಗ್ಗೆ ಚರ್ಚಿಸಲಾಗುತ್ತದೆ ಎಂದರು.

Leave a Comment

Your email address will not be published. Required fields are marked *