ಸಮಗ್ರ ನ್ಯೂಸ್: ಕರಾವಳಿ ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಒಳನಾಡಿನಲ್ಲಿ ಒಣ ಹವೆಯ ವಾತಾವರಣ ಇರಲಿದ್ದು, ಬೆಂಗಳೂರಿನಲ್ಲೂ ಮೋಡ ಕವಿದ ವಾತಾವರನದೊಂದಿಗೆ ಲಘು ಪ್ರಮಾಣದಲ್ಲಿ ಮಳೆಯಾಗಬಹುದು ಎಂಬ ಮುನ್ಸೂಚನೆಯಿದೆ.
ಕರಾವಳಿಯ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ, ಮಂಡ್ಯ, ಮೈಸೂರು, ಕೊಡಗು, ತುಮಕೂರು, ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳು ಲಘು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉತ್ತರ ಕನ್ನಡ ಸೇರಿದಂತೆ ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಸಂಪೂರ್ಣವಾಗಿ ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡಿನಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಒಣಹವೆಯ ವಾತಾವರಣ ಇರಲಿದೆ ಎಂದು ಇಲಾಖೆ ವರದಿ ಮಾಡಿದೆ.







