ಇಂದು ಕೃಷ್ಣನಗರಿ ಉಡುಪಿಗೆ ಮೋದಿ ಭೇಟಿ

ಸಮಗ್ರ ನ್ಯೂಸ್: ಪರ್ಯಾಯ ಪುತ್ತಿಗೆಮಠ ಮತ್ತು ಶ್ರೀಕೃಷ್ಣಮಠಗಳ ಕಾರ್ಯಕ್ರಮದಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿಯವರು ಶುಕ್ರವಾರ ಬೆಳಿಗ್ಗೆ 11 ಗಂಟೆಗೆ ಉಡುಪಿಗೆ ಬರಲಿದ್ದಾರೆ.

Ad Widget ... ..

11.30ಕ್ಕೆ ಒಂದೂವರೆ ಕಿ.ಮೀ ರೋಡ್‌ ಶೋ ನಡೆಸಿದ ಬಳಿ ಶ್ರೀಕೃಷ್ಣಮಠಕ್ಕೆ ತೆರಳುವವರು. ನಂತರ ಅಲ್ಲಿ ನಡೆಯುವ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ ಅವರು ಪಾಲ್ಗೊಳ್ಳಲಿದ್ದಾರೆ. ಪ್ರಧಾನಿ ಭೇಟಿಯ ಕಾರಣ ನಗರದಲ್ಲಿ ಬಿಗಿ ಪೊಲೀಸ್‌ ಬಂದೋಬಸ್ತ್ ಏರ್ಪಡಿಸಲಾಗಿದೆ.

Ad Widget

ಸುವರ್ಣ ತೀರ್ಥ ಮಂಟಪದ ಶಿಖರ ಪ್ರತಿಷ್ಠೆ : ಶ್ರೀ ಕೃಷ್ಣಮಠದಲ್ಲಿ ಮೋದಿ ಅವರು ಅನಾವರಣಗೊಳಿಸಲಿರುವ ಸುವರ್ಣ ತೀರ್ಥ ಮಂಟಪದ ಶಿಖರ ಪ್ರತಿಷ್ಠೆ ಹಾಗೂ ಕಲಶಾಭಿಷೇಕ ಗುರುವಾರ ನೆರವೇರಿತು.

ಸುವರ್ಣ ತೀರ್ಥ ಮಂಟಪದ ಶಿಖರ ಪ್ರತಿಷ್ಠೆ ನೆರವೇರಿಸಿದ ಅದಮಾರು ಮಠದ ವಿಶ್ವಪ್ರಿಯ ತೀರ್ಥ ಶ್ರೀಪಾದರು ಹಾಗೂ ಪರ್ಯಾಯ ಪುತ್ತಿಗೆ ಮಠಾಧೀಶ ಸುಗುಣೇಂದ್ರ ತೀರ್ಥ ಶ್ರೀಪಾದರು ಕಲಶಾಭಿಷೇಕ ಮಾಡಿ, ಪೂಜೆ ಸಲ್ಲಿಸಿದರು.

ಪುತ್ತಿಗೆ ಮಠಾಧೀಶ ಸುಗುಣೇಂದ್ರ ತೀರ್ಥ ಶ್ರೀಪಾದರ ಸನ್ಯಾಸ ದೀಕ್ಷೆಯ ಸುವರ್ಣ ಮಹೋತ್ಸವದ ಅಂಗವಾಗಿ ಕೃಷ್ಣ ಮಠದ ಒಳಗಿನ ತೀರ್ಥಮಂಟಪವನ್ನು ಸುವರ್ಣ ತೀರ್ಥ ಮಂಟಪವನ್ನಾಗಿ ಮಾಡಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಇದೇ 28 ರಂದು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡುತ್ತಿರುವ ಕಾರಣ ನಗರದೆಲ್ಲೆಡೆ ಪೊಲೀಸರು ಬಿಗಿ ಬಂದೋಬಸ್ತ್‌ ಮಾಡಲಾಗಿದೆ.

ಮೋದಿ ಅವರು ತೆರಳಲಿರುವ ರಸ್ತೆಯಲ್ಲಿ ಪೊಲೀಸರು ಹಾಗೂ ಭದ್ರತಾ ಪಡೆ ಗುರುವಾರ ರಿಹರ್ಸಲ್‌ ನಡೆಸಿವೆ. ಹಲವು ವಾಹನಗಳನ್ನು ಬಳಸಿ ರಿಹರ್ಸಲ್‌ ನಡೆಸಲಾಯಿತು.

ರಿಹರ್ಸಲ್‌ಗಾಗಿ ಆದಿ ಉಡುಪಿಯಿಂದ ಬನ್ನಂಜೆ , ಸಿಟಿ ಬಸ್‌ ನಿಲ್ದಾಣ, ಕಲ್ಸಂಕ ಮಾರ್ಗದಲ್ಲಿ ಸಂಪೂರ್ಣ ವಾಹನ ಸಂಚಾರವನ್ನು ಕೆಲ ಸಮಯ ಸ್ಥಗಿತಗೊಳಿಸಲಾಗಿತ್ತು. ನಗರ ವ್ಯಾಪ್ತಿಯ ಎಲ್ಲೆಡೆ ಪೊಲೀಸರನ್ನು ಭದ್ರತೆಗಾಗಿ ನಿಯೋಜನೆ ಮಾಡಲಾಗಿದೆ.

‘ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯಕ್ರಮದ ಭದ್ರತೆಗೆ ವಿವಿಧ ಶ್ರೇಣಿಯ ಅಧಿಕಾರಿಗಳು ಸೇರಿದಂತೆ ಮೂರು ಸಾವಿರ ಮಂದಿ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ’ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಹರಿರಾಮ್‌ ಶಂಕರ್‌ ತಿಳಿಸಿದ್ದಾರೆ.

Leave a Comment

Your email address will not be published. Required fields are marked *